ಕಾರ್ಯಕಾರಣಿ ಸಭೆ ಬಳಿಕ ಸಂಪುಟ ವಿಸ್ತರಣೆ : ಸಿಎಂ ಬೊಮ್ಮಾಯಿ
ನವದೆಹಲಿ: ಕಾರ್ಯಕಾರಿಣಿ ಸಭೆ ನಂತರ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಮಾಡೋಣ ಎಂದು ಜೆ. ಪಿ ನಡ್ಡಾ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸಧ್ಯ ಸಿಎಂ ಬೊಮ್ಮೊಯಿ ದೆಹಲಿ ಪ್ರವಾಸದಲ್ಲಿದ್ದು, ಹೈಕಮಾಂಡ್ ಜೊತೆ ನಡೆಸಿದ ಸಭೆ ಬಳಿಕ ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜೆ ಪಿ ನಡ್ಡಾ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಥೂಲವಾಗಿ ಚರ್ಚೆಯಾಗಿದೆ. ಅವರು ಎಲ್ಲ ಮಾಹಿತಿ ಪಡೆದುಕೊಂಡಿದ್ದಾರೆ. ಕಾರ್ಯಕಾರಣಿ ಸಭೆಗೆ ಬಂದಾಗ ಉಳಿದ ವಿಚಾರಗಳನ್ನು ಚರ್ಚಿಸೋಣ ಎಂದು ಹೇಳಿದ್ದಾರೆ ಎಂದು ತಿಳಿಸಿದರು.
ಇನ್ನೂ ಬರುವ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯಿದ್ದು, ಇದಕ್ಕೆ ಏನು ತಯಾರಿ ಮಾಡಿಕೊಳ್ಳಬೇಕೆಂದು ರಾಜ್ಯ ಕಾರ್ಯಕಾರಿಣಿ ಸಮಿತಿಯಲ್ಲಿ ತೀರ್ಮಾನ ಮಾಡೋಣ. ಅದಕ್ಕೆ ಪೂರ್ವಭಾವಿಯಾಗಿ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಿ ಎಂದು ಜೆ ಪಿ ನಡ್ಡಾ ಸೂಚನೆ ಕೊಟ್ಟಿದ್ದಾರೆ. ಅಮಿತ್ ಶಾ ಅವರನ್ನು ಭೇಟಿಯಾಗಲಿಲ್ಲ, ನಿನ್ನೆ ಸಂಸತ್ತಿನಲ್ಲಿ ಮಸೂದೆಗಳು ವಿಳಂಬವಾಗಿದ್ದರಿಂದ ಸಮಯಾವಕಾಶ ಲಭ್ಯವಾಗಲಿಲ್ಲ, ಮತ್ತೆ ಅವಕಾಶ ಸಿಕ್ಕಾಗ ಭೇಟಿ ಮಾಡುತ್ತೇನೆ ಎಂದರು.