ADVERTISEMENT
Sunday, July 13, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಚುನಾವಣೆ ಬಳಿಕ ಬದಲಾವಣೆ ನಿಶ್ಚಿತ : ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಮಾತು

Mahesh M Dhandu by Mahesh M Dhandu
October 30, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಚುನಾವಣೆ ಬಳಿಕ ಬದಲಾವಣೆ ನಿಶ್ಚಿತ : ಸಂಪುಟ ವಿಸ್ತರಣೆ ( cabinet expansion ) ಬಗ್ಗೆ ಸಿಎಂ ಮಾತು

ಬೆಂಗಳೂರು : ರಾಜರಾಜೇಶ್ವರಿ ಹಾಗೂ ಶಿರಾ ಉಪಚುನಾವಣೆ ಬಳಿಕ ಎಲ್ಲವೂ ಬದಲಾವಣೆ ಆಗುವುದು ನಿಶ್ಚಿತ ಎಂದು ಸಂಪುಟ ವಿಸ್ತರಣೆ ( cabinet expansion ) ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

Related posts

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

July 13, 2025
ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಧರ್ಮಸ್ಥಳ ಮರ್ಡರ್ ಮಿಸ್ಟರಿ: ದೂರುದಾರನ ಮಾಹಿತಿ ಬೆನ್ನಲ್ಲೇ ಅಸ್ಥಿಪಂಜರದ ಅವಶೇಷಗಳು ಪತ್ತೆ!

July 13, 2025

ಶಿರಾದಲ್ಲಿ ಪ್ರಚಾರಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಪುಟ ವಿಸ್ತರಣೆ ವಿಚಾರ ಸಂಬಂಧ ಚುನಾವಣೆ ಮುಗಿದ ಮೇಲೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತುಕತೆ ನಡೆಸಿ ಬರುತ್ತೇನೆ. ಬಳಿಕ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಹೇಳಿದರು.

cabinet expansion

ಚುನಾವಣೆ ಮುಗಿದ ಮೇಲೆ ಎಲ್ಲವೂ ಬದಲಾವಣೆ ಆಗುವುದು ನಿಶ್ಚಿತ ಎಂದ ಬಿಎಸ್ ವೈ, ಚುನಾವಣೆ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ದೊಡ್ಡ ಮುಖಭಂಗ ಆಗುತ್ತದೆ. ಇದುವರೆಗೂ ನಾನು ಒಂದು ಶಬ್ದ ಮಾತನಾಡಿಲ್ಲ. ದೊಡ್ಡ ಅಂತರದಲ್ಲಿ ಎರಡೂ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಇದುವರೆಗೂ ಯಾವುದೇ ಟೀಕೆ ಮಾಡಿಲ್ಲ, ಯಾರ ಹೆಸರು ಹೇಳಿಲ್ಲ. ಚುನಾವಣೆ ಮುಗಿದ ಮೇಲೆ ಅವರೇ ಉತ್ತರ ಕೊಡಲಿ. ನಾನು ಪ್ರಚಾರಕ್ಕೆ ಹೋಗಬೇಕು ಅಂತಾ ಇರಲಿಲ್ಲ. ಆದರೆ ಸಿದ್ದರಾಮಯ್ಯ, ದೇವೇಗೌಡರು, ಡಿ.ಕೆ.ಶಿವಕುಮಾರ್, ಹೆಚ್.ಡಿ.ಕುಮಾರಸ್ವಾಮಿ ಪ್ರಚಾರಕ್ಕೆ ಹೋಗಿದ್ದಾರೆ.

ಇದನ್ನೂ ಓದಿ : ಬಿಜೆಪಿ ಸರ್ಕಾರ ಸಾಲಮನ್ನಾ ಹಣ ಬಿಡುಗಡೆ ಮಾಡಿಲ್ಲ : ಹೆಚ್ ಡಿಕೆ

ಮುಖ್ಯಮಂತ್ರಿಯಾಗಿ ನಾನು ಹೋಗಲಿಲ್ಲ ಅಂದರೆ ತಪ್ಪಾಗುತ್ತದೆ. ಅದಕ್ಕೆ ಎರಡು ಕಡೆ ಪ್ರಚಾರಕ್ಕೆ ಹೋಗುತ್ತೇನೆ. ಇಂದು ಶಿರಾ, ನಾಳೆ ಆರ್.ಆರ್ ನಗರದಲ್ಲಿ ಪ್ರಚಾರ ನಡೆಸಲಿದ್ದೇನೆ ಎಂದು ತಿಳಿಸಿದರು.

ಸಂಪುಟ ವಿಸ್ತರಣೆ ಕುರಿತಾಗಿ ಕಳೆದ ಕೆಲ ತಿಂಗಳಿನಿಂದ ಚರ್ಚೆ ಆಗುತ್ತಲೇ ಇದೆ. ಈ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೆಹಲಿ ವರಿಷ್ಠರ ಜೊತೆ ಚರ್ಚೆ ನಡೆಸಿದ್ದರು. ಆದ್ರೆ ಸಂಪುಟ ವಿಸ್ತರಣೆಗೆ ದೆಹಲಿ ಬಿಗ್ ಬಾಸ್ ಗಳು ಗ್ರೀನ್ ಸಿಗ್ನಲ್ ನೀಡಿರಲಿಲ್ಲ. ಈ ಮಧ್ಯೆ ಉಪಚುನಾವಣೆಗಳು ಕೂಡ ಘೋಷಣೆ ಆಗಿದ್ದು, ಸಂಪುಟ ಸರ್ಜರಿಗೆ ತಾತಾಲ್ಕಿಕ ಬ್ರೇಕ್ ಬಿತ್ತು.

cabinet expansion

ಸಂಭಾವ್ಯ ಸಚಿವರ ಪಟ್ಟಿ
1. ಎಂಟಿಬಿ ನಾಗರಾಜ್
2. ಆರ್. ಶಂಕರ್
3. ಉಮೇಶ್ ಕತ್ತಿ
4. ಹೆಚ್. ವಿಶ್ವನಾಥ್ ಅವರಿಗೂ ಮಂತ್ರಿಗಿರಿ ಸಾಧ್ಯತೆ

ಇದನ್ನೂ ಓದಿ : ಮತಕ್ಕಾಗಿ `ಗಜ’ ಸಂಚಾರ : ಸಾಮಾಜಿಕ ಅಂತರ ಎಲ್ಲಿ ‘ಸ್ವಾಮಿ’..?

ಈ ಮೂವರಿಗೆ ಸಚಿವ ಸ್ಥಾನ ನೀಡುವುದು ಈ ಹಿಂದೆಯೇ ಫಿಕ್ಸ್ ಆಗಿತ್ತು. ಅಂದರೆ ಕಳೆದ ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನಗೊಂಡ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದವರಿಗೆ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆದಿದೆ. ಅದರಂತೆ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿದ್ದ ಎಸ್.ಟಿ ಸೋಮಶೇಖರ್, ರಮೇಶ್ ಜಾರಕಿಹೊಳಿ, ಬಿ.ಸಿ ಪಾಟೀಲ್, ಸುಧಾಕರ್ ಸೇರಿದಂತೆ ಇನ್ನು ಕೆಲವರಿಗೆ ಮಂತ್ರಿ ಸ್ಥಾನ ದೊರಕಿದೆ.

ಮೂವರು ಮೂಲ ಬಿಜೆಪಿ ಶಾಸಕರಿಗೂ ಸಂಪುಟದಲ್ಲಿ ಸ್ಥಾನ ನೀಡುವ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಹಾಗೂ ಜೆ.ಪಿ ನಡ್ಡಾ ಜತೆ ಚರ್ಚೆ ನಡೆಸಲಿದ್ದಾರೆ. ಅವರು ಯಾರು ಎನ್ನುವುದು ಇನ್ನೂ ಪಕ್ಕಾ ಆಗಿಲ್ಲ.
ಮೂಲಗಳ ಪ್ರಕಾರ…
1. ಬಸನಗೌಡ ಪಾಟೀಲ್ ಯತ್ನಾಳ್
2. ಸುನಿಲ್‍ಕುಮಾರ್
3. ಅರವಿಂದ ಲಿಂಬಾವಳಿ ಸಂಪುಟ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B.S. YeddyurappaBJPCabinet Expansion
ShareTweetSendShare
Join us on:

Related Posts

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

by Shwetha
July 13, 2025
0

ನಗರದ ಬೇಕರಿ, ಜ್ಯೂಸ್ ಅಂಗಡಿ, ಕಾಂಡಿಮೆಂಟ್ಸ್ ಮಾಲೀಕರಿಗೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯು ಮಹತ್ವದ ಸ್ಪಷ್ಟನೆಯನ್ನು ನೀಡಿದೆ. ಆನ್‌ಲೈನ್ ಮೂಲಕ ಹಣ ಸ್ವೀಕರಿಸಿದ ಸಣ್ಣ ವ್ಯಾಪಾರಿಗಳಿಗೆ ಇಲಾಖೆಯು...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಧರ್ಮಸ್ಥಳ ಮರ್ಡರ್ ಮಿಸ್ಟರಿ: ದೂರುದಾರನ ಮಾಹಿತಿ ಬೆನ್ನಲ್ಲೇ ಅಸ್ಥಿಪಂಜರದ ಅವಶೇಷಗಳು ಪತ್ತೆ!

by Shwetha
July 13, 2025
0

ಮಂಗಳೂರು: ಇಡೀ ರಾಜ್ಯದ ಗಮನ ಸೆಳೆದಿರುವ ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆದಿವೆ. ದೂರುದಾರನ ಹೇಳಿಕೆ ದಾಖಲಾದ ಬೆನ್ನಲ್ಲೇ, ಬೆಳ್ತಂಗಡಿ ಪೊಲೀಸರು ಅಸ್ಥಿಪಂಜರದ...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಮೊಟ್ಟೆ ಕಿಮಾ ರೈಸ್‌ ರೆಸಿಪಿ

by Shwetha
July 13, 2025
0

ಮೊಟ್ಟೆ ಕಿಮಾ ರೈಸ್ (Egg Keema Rice) ಒಂದು ರುಚಿಕರವಾದ ಮತ್ತು ಸುಲಭವಾಗಿ ತಯಾರಿಸಬಹುದಾದ ಖಾದ್ಯ. ಇದನ್ನು ಸಾಮಾನ್ಯವಾಗಿ ಮೊಟ್ಟೆ ಬುರ್ಜಿ/ಕೀಮಾ ಮಸಾಲಾವನ್ನು ಅನ್ನದೊಂದಿಗೆ ಬೆರೆಸಿ ಮಾಡಲಾಗುತ್ತದೆ....

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಮಟನ್ ಕಾಲ್ ಸೂಪ್ ಆರೋಗ್ಯ ಪ್ರಯೋಜನಗಳು

by Shwetha
July 13, 2025
0

ಮಟನ್ ಕಾಲು ಸೂಪ್ (Mutton Call Soup) ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಇದು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಸಾಂಪ್ರದಾಯಿಕವಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ದೇಹವನ್ನು ಬಲಪಡಿಸಲು...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಶ್ರೀ ವೀರಭದ್ರ ದೇವಸ್ಥಾನ ಯಡೂರು ವೀರಭದ್ರನಗರ, ಬೆಳಗಾವಿ ಇತಿಹಾಸ ಮತ್ತು ಮಹಿಮೆ

by Shwetha
July 13, 2025
0

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು ವೀರಭದ್ರನಗರದಲ್ಲಿರುವ ಶ್ರೀ ವೀರಭದ್ರ ದೇವಸ್ಥಾನವು ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಈ ದೇವಾಲಯದ ಇತಿಹಾಸ ಮತ್ತು ಮಹಿಮೆಯ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram