ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಮತ್ತೆ ಜೋರಾಗಿದೆ. ಇತ್ತೀಚೆಗೆ ಹಿರಿಯ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ ಮಾಡುವಂತೆ ಮನವಿ ಸಲ್ಲಿಸಿದ್ದರು. ಈ ನಡುವೆ ಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರು ಮಹತ್ವದ ಹೇಳಿಕೆ ನೀಡಿದ್ದು, ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಮೇ 4ರಂದು ಹೊರಬರುವ ಚುನಾವಣಾ ಫಲಿತಾಂಶದ ಬಳಿಕ ಈ ವಿಚಾರ ಚರ್ಚೆಗೆ ಬರಬಹುದು ಎಂದು ಅವರು ಹೇಳಿದ್ದಾರೆ. ಜೊತೆಗೆ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆಸಬಾರದು ಎಂದು ಹೈಕಮಾಂಡ್ ಸೂಚನೆ ನೀಡಿರುವುದರಿಂದ, ಆ ವಿಷಯದ ಬಗ್ಗೆ ತಾವು ಮಾತನಾಡುವುದಿಲ್ಲ ಎಂದಿದ್ದಾರೆ.







