ಮಂಡ್ಯ: ಜಿಲ್ಲೆಯಲ್ಲಿ ಕೃಷಿ ವಿಶ್ವ ವಿದ್ಯಾಲಯ(Agriculture University) ಸ್ಥಾಪಿಸಲು ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಸ್ಥಾಪಿಸಬೇಕೆನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ.
ಈಗಾಗಲೇ ರಾಜ್ಯದ ಶಿವಮೊಗ್ಗದಲ್ಲಿ (Shivamogga) ಸಸ್ಯಾಧಾರಿತ ಕೃಷಿ ವಿಜ್ಞಾನಗಳ ಸಮಗ್ರ ಕೃಷಿ ಹಾಗೂ ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ಇದೇ ಮಾದರಿಯಲ್ಲಿ ಮಂಡ್ಯದಲ್ಲೂ ಸ್ಥಾಪಿಸಲು ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ದೊರೆತಿದೆ.
ಮಂಡ್ಯ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳು ಸೇರ್ಪಡೆಗೊಳ್ಳುತ್ತವೆ. ಈ ಜಿಲ್ಲೆಗಳಲ್ಲಿರುವ ಯಾವುದೇ ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳ ಶಿಕ್ಷಣ, ಸಂಶೋಧನೆ ಹಾಗೂ ವಿಸ್ತರಣಾ ಘಟಕಗಳು ಇಲ್ಲ. ಹೀಗಾಗಿ ಯಥಾವತ್ತಾಗಿ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಸೇರ್ಪಡೆಗೊಳ್ಳುತ್ತವೆ.
ಶಿವಮೊಗ್ಗ ತೋಟಗಾರಿಕೆ ಮತ್ತು ಕೃಷಿ ವಿಶ್ವವಿದ್ಯಾಲಯದ ಮಾದರಿಯಲ್ಲಿ ಮಂಡ್ಯದಲ್ಲಿ ಪ್ರಾರಂಭಿಸುವ ನೂತನ ಕೃಷಿ ವಿಶ್ವವಿದ್ಯಾಲ ಸ್ಥಾಪಿಸಲು ಈಗ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.








