ಹುಬ್ಬಳ್ಳಿ: ಸಚಿವ ಸಂಪುಟ ಪುನಾರಚನೆ ಮತ್ತು ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟದ್ದು ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಸಚಿವ ಜಗದೀಶ್ ಶೆಟ್ಟರ್, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ವರಿಷ್ಠರ ಜೊತೆ ಚರ್ಚಿಸಲಿದ್ದಾರೆ. ಬಹಳಷ್ಟು ಸರ್ಕಸ್ ಮಾಡಿ ಸರ್ಕಾರ ನಡೆಸುತ್ತಿದ್ದೇವೆ. ಹೊಸಬರು ಶಾಸಕರಾಗಿ ಆಯ್ಕೆಯಾಗಿ ಬಂದಿದ್ದು, ಅವರಿಗೆ ಆದ್ಯತೆ ಕೊಡಬೇಕಾಗುತ್ತೆ. ಹಳಬರಲ್ಲಿ ಸೀನಿಯರ್‍ಗಳಿಗೆ ಆದ್ಯತೆ ಕೊಡಬೇಕಾಗುತ್ತೆ ಎಂದರು.
ಪಕ್ಷದ ವರಿಷ್ಠರಾಗಲಿ, ಸಿಎಂ ಆಗಲಿ ನನ್ನ ಅಭಿಪ್ರಾಯ ಕೇಳಿಲ್ಲ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಏನೂ ಹೇಳುವ ಪರಿಸ್ಥಿತಿಯಲ್ಲಿ ನಾನಿಲ್ಲ ಎಂದ ಶೆಟ್ಟರ್, ಶಾಲೆಗಳ ಆರಂಭದ ಬಗ್ಗೆ ಪಾಲಕರಲ್ಲಿ ವಿಭಿನ್ನ ಅಭಿಪ್ರಾಯಗಳಿವೆ.
ಪೆÇೀಷಕರಿಗೆ ನಮ್ಮ ಮಕ್ಕಳು ಸುರಕ್ಷಿತ ಎಂಬ ಭಾವನೆ ಬರುವ ತನಕ ಶಾಲೆಗಳನ್ನು ಆರಂಭಿಸೋದು ಬೇಡ. ಶಾಲೆ ತೆರೆಯುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡವಿದೆ. ಬೇಕಿದ್ದರೆ ಕೆಲವು ಶಾಲೆಗಳನ್ನು ಪ್ರಾಯೋಗಿಕವಾಗಿ ಆರಂಭಿಸಲಿ. ಸಾಧಕ ಬಾಧಕ ನೋಡಿಕೊಂಡ ನಂತರ ಶಾಲೆಗಳನ್ನು ಪ್ರಾರಂಭಿಸಬಹುದು ಎಂದು ಹೇಳಿದ್ದಾರೆ.
ಕೊರೊನಾ ನಡುವೆ ಶಾಲೆಗಳನ್ನು ಆರಂಭಿಸುವ ಬಗ್ಗೆ ಪೋಷಕರಲ್ಲಿ ಸದ್ಯಕ್ಕೆ ಭಯದ ವಾತಾವರಣವಿದೆ. ತಕ್ಷಣವೇ ಎಲ್ಲಾ ಶಾಲೆಗಳನ್ನು ಪ್ರಾರಂಭಿಸುವುದರಿಂದ ಸಮಸ್ಯೆಗಳು ಎದುರಾಗುತ್ತವೆ. ಶಾಲೆಗಳ ಆರಂಭದ ಕುರಿತು ಶಿಕ್ಷಣ ಸಚಿವರು ಬರೆದಿರುವ ಪತ್ರ ನನಗೆ ಬಂದಿಲ್ಲ. ಈ ಕುರಿತು ನಾನು ಏನನ್ನೂ ಹೇಳುವುದಿಲ್ಲ. ಇಷ್ಟು ದಿನ ನಾವು ಅಧಿವೇಶನದಲ್ಲಿ ಇದ್ದೆವು. ಅಲ್ಲಿಯೆ ಚರ್ಚಿಸಿಬಹುದಿತ್ತು. ಪತ್ರ ಬರೆದರೆ ಏನ್ ಹೇಳೋದು ಎಂದು ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.
ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ
ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...








