SC-ST Reservation | SC, ST ಮೀಸಲಾತಿ ಹೆಚ್ಚಳಕ್ಕೆ ವಿಶೇಷ ಅಧಿವೇಶನ ಕರೆಯಿರಿ
ರಾಯಚೂರು : ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಬೇಡ, ವಿಶೇಷ ಅಧಿವೇಶನ ಕರೆಯಿರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ಸಂಬಂಧ ಪ್ರತಿಕ್ರಿಯೆ ನೀಡಿದರು.
ಜಾತಿ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಇರಬೇಕು. ಹೀಗಾಗಿ ಮೀಸಲಾತಿ ಹೆಚ್ಚಳ ಆಗಬೇಕು ಅನ್ನೋದು ಹಳೆಯ ಹೋರಾಟವಾಗಿದೆ.
ಸರ್ಕಾರಕ್ಕೆ ನಿಜವಾಗಿ ಕಾಳಜಿ ಇದ್ದರೇ ಸುಗ್ರೀವಾಜ್ಞೆ ಹೊರಡಿಸುವ ಬದಲು ವಿಶೇಷ ಅಧಿವೇಶನ ಕರೆಯಲಿ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಡಿಸೆಂಬರ್ ವರೆಗೆ ಅಸೆಂಬ್ಲಿಗೆ ಯಾಕೆ ಕಾಯಬೇಕು, ಒಂದು ವಾರದ ಒಳಗೆ ಕರೆಯಿರಿ. ನಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ.
ಅಧಿವೇಶನದಲ್ಲಿ ಕಾಯ್ದೆ ಪಾಸ್ ಆದ ಮೇಲೆ ದೆಹಲಿಲ್ಲಿ ಕುಳಿತು 9 ಶೆಡ್ಯೂಲ್ ಮಾಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದೇ ವೇಳೆ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಬಗ್ಗೆ ಮಾತನಾಡಿ ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ.
ಪಾದಯಾತ್ರೆಯ ಫಲ ಮುಂದಿನ ಚುನಾವಣೆಯಲ್ಲಿ ಪಡೆಯುತ್ತೇವೆ ಎಂದಿದ್ದಾರೆ.