ರೇಷ್ಮೆ ಮಾರುಕಟ್ಟೆ ಸ್ಥಳಾಂತರಕ್ಕೆ ವಿರೋಧ – ಫೆ. 20ರಂದು ರಾಮನಗರ ಬಂದ್
ರಾಮನಗರ: ರೇಷ್ಮೆನಗರಿ ರಾಮನಗರದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಳಾಂತರ ವಿರೋಧಿಸಿ ಫೆ.20 ರಂದು ಜನ ಜಾಗೃತಿ ವೇದಿಕೆ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ರಾಮನಗರ ಬಂದ್ ಗೆ ಕರೆ ನೀಡಲಾಗಿದೆ.
ಈ ಕುರಿತು ಜನ ಜಾಗೃತಿ ವೇದಿಕೆ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಎರಡು ವರ್ಷಗಳಿಂದ ನಗರಸಭೆ ಚುನಾವಣೆ ನಡೆದಿಲ್ಲ. ಈ ಹಿನ್ನೆಲೆ ಅಧಿಕಾರಿಗಳೇ ಸರ್ವಾಧಿಕಾರಿ ಎನ್ನುವಂತೆ ವರ್ತಿಸುತ್ತಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗುವಂತಹ ಯಾವುದೇ ಕಾರ್ಯಗಳು ನಡೆಯುತ್ತಿಲ್ಲ. ಅಧಿಕಾರಿಗಳು ಲಂಚ ಕೊಟ್ಟಲ್ಲಿ ಮಾತ್ರ ಅಲ್ಪ ಸ್ವಲ್ಪ ಕೆಲಸ ಮಾಡಿಕೊಡಲಾಗುತ್ತಿದ್ದು, ಈ ಕುರಿತು ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.
ಜೀವನವಿಡೀ ಕಷ್ಟ ಪಟ್ಟು ಸಂಪಾದಿಸಿದ ಹಣ ಗೆದ್ದಲಹುಳುಗಳ ಪಾಲಾಯ್ತು ಮನೆಕಟ್ಟುವ ಕನಸು ಭಗ್ನವಾಯ್ತು..!
ಈ ಆಡಳಿತ ವೈಖರಿಯಿಂದ ಬೇಸತ್ತು ಫೆ.20 ರಂದು ರಾಮನಗರ ಬಂದ್ಗೆ ಕರೆ ನೀಡಲಾಗಿದ್ದು, ಅಂದು ಬೆಳಗ್ಗೆ 11 ಗಂಟೆಗೆ ರಾಮನಗರದ ಮಿನಿ ವಿಧಾನಸೌಧದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಸರ್ಕಾರ ರೇಷ್ಮೆ ಮಾರುಕಟ್ಟೆಯನ್ನು ಚನ್ನಪಟ್ಟಣಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದ್ದು, ಮಾರುಕಟ್ಟೆ ಸ್ಥಳಾಂತರವಾದಲ್ಲಿ ರಾಮನಗರಕ್ಕೆ ರೇಷ್ಮನಗರಿ ಎಂದಿರುವ ಹೆಸರಿಗೆ ಧಕ್ಕೆಯಾಗಲಿದೆ. ಹೀಗಾಗಿ ಬಂದ್ ದಿನ ರೇಷ್ಮೆ ವಹಿವಾಟು ಸ್ಥಗಿತಗೊಳಿಸಿ ಬಂದ್ ಗೆ ಬೆಂಬಲ ಕೊಡಲಾಗುವುದು ಎಂದು ತಿಳಿಸಿದ್ದಾರೆ.