ಕಲಬುರಗಿ ; ರೈಲಿಗೆ ತಲೆ ಕೊಟ್ಟು ಖಾಸಗಿ ನ್ಯೂಸ್ ಚಾನೆಲ್ ನ ಕ್ಯಾಮೆರಾ ಮನ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಪಿಡಿಎ ಎಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ. 42 ವರ್ಷದ ಹನುಮಂತ್ ರಾವ್ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾರೆ.
ಈತ ವೈಯಕ್ತಿಕ ಸಮಸ್ಯೆಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಸಂಬಂಧ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.