ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಏಪ್ರಿಲ್ 15ರ ನಂತರ ಅಡಿಕೆ ಖರೀದಿಸಲು ಕ್ಯಾಂಪ್ಕೋ ಚಿಂತನೆ – ಎಸ್ ಆರ್. ಸತೀಶ್ಚಂದ್ರ

admin by admin
April 12, 2020
in International, Politics, Samagra karnataka
Share on FacebookShare on TwitterShare on WhatsappShare on Telegram

ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಕ್ಯಾಂಪ್ಕೋ ಸಂಸ್ಥೆ ಮುಂದಿನ ವಾರದಿಂದ ಅಡಿಕೆ ಖರೀದಿ ನಡೆಸಲು ಸಿದ್ಧತೆ ನಡೆಸಲಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಅವರು ತಿಳಿಸಿದ್ದಾರೆ.

ಲಾಕ್ ಡೌನ್ ಜನರ ಹಿತದೃಷ್ಟಿಯನ್ನು ಮನಸ್ಸಿನಲ್ಲಿಟ್ಟುಕೊಂಡು ತೆಗೆದುಕೊಂಡಿರುವ ನಿರ್ಧಾರವಾಗಿದ್ದು, ಇಂತಹ ಸಮಯದಲ್ಲಿ ‌ಅಗತ್ಯಸೇವೆ ಹೊರತು ಪಡಿಸಿ ಇತರ ಎಲ್ಲಾ ವ್ಯವಹಾರಗಳು ಬಂದ್ ಆಗಿತ್ತು. ಬೆಳೆಗಾರರ ಹಿತದೃಷ್ಟಿಯಿಂದ ಕ್ಯಾಂಪ್ಕೋ ಸಂಸ್ಥೆ ಸರಕಾರದ ಜೊತೆ ಉನ್ನತ ಮಟ್ಟದ ಮಾತುಕತೆ ನಡೆಸಿ ಏಪ್ರಿಲ್ 15ರ ನಂತರ ಅಡಿಕೆ ಖರೀದಿಗೆ ತೀರ್ಮಾನಿಸಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೋ ಆಡಳಿತ ನಿರ್ದೇಶಕ ಸುರೇಶ್ ಭಂಡಾರಿ, ನಿರ್ದೇಶಕ ಚಣಿಲ ತಿಮ್ಮಪ್ಪ ಶೆಟ್ಟಿ, ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ, ಸಾಜ ರಾಧಾಕೃಷ್ಣ ಆಳ್ವ ಅವರು ಸಭೆ ನಡೆಸಿದರು.
ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷತಾ ನಿಯಮಗಳನ್ನು ಪಾಲಿಸಿಕೊಂಡು ಕಾನೂನಿನ ಚೌಕಟ್ಟಿನ ಒಳಗೆ ಖರೀದಿ ನಡೆಯಲಿದ್ದು, ಏಪ್ರಿಲ್ 15ರ ನಂತರ ಪ್ರತಿ ಸದಸ್ಯ ಅಡಿಕೆ ಬೆಳೆಗಾರರ ದೈನಂದಿನ ವ್ಯವಹಾರಕ್ಕೆ ತೊಂದರೆಯಾಗದಂತೆ ತಿಂಗಳಿಗೆ 25,000 ಬೆಲೆಯ ಅಥವಾ 1ಕ್ವಿಂಟಾಲ್ ಅಡಿಕೆ ಖರೀದಿ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಈ ಸಂದರ್ಭದಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದರು.
ಲಾಕ್ ಡೌನ್ ಕಳೆದು ಎಲ್ಲಾ ಸರಿಯಾದ ನಂತರ ಒಮ್ಮೆಲೇ ಉತ್ಪಾದನೆಗೆ ಒತ್ತಡ ಹೆಚ್ಚಿ ಮತ್ತೆ ಅಡಿಕೆಗೆ ಬೇಡಿಕೆ ಬರಲಿದೆ, ಆದುದರಿಂದ ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಾಗಿಲ್ಲ‌ ಎಂದು ಎಸ್.ಆರ್.ಸತೀಶ್ಚಂದ್ರ ಹೇಳಿದರು.

Related posts

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

July 1, 2026
ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

July 1, 2026
Tags: #coronakarnataka#lockdownindia#StayHomeSaveLivesArecanutcampcoKadabaKaravaliPutturSulliaTulu
ShareTweetSendShare
Join us on:

Related Posts

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

by Shwetha
July 1, 2026
0

ರಾಜಕಾರಣ ಎಂಬುದು ನಿಂತ ನೀರಲ್ಲ, ಅದು ನಿರಂತರವಾಗಿ ಓಡುವ ರೇಸ್ ಎನ್ನುವ ಸತ್ಯವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಅತ್ಯಂತ ನೇರ ನುಡಿಗಳಲ್ಲಿ ಬಿಚ್ಚಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ...

ಆಡಿಯೋ ವಿವಾದಕ್ಕೆ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ; ಅದು ನನ್ನದಲ್ಲ

ಆಡಿಯೋ ವಿವಾದಕ್ಕೆ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ; ಅದು ನನ್ನದಲ್ಲ

by Shwetha
July 1, 2026
0

ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಕಾರಣವಾಗಿರುವ ವೈರಲ್ ಆಡಿಯೋ ವಿವಾದದ ಕುರಿತು ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

by Shwetha
June 30, 2026
0

ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದ ಭವಿಷ್ಯದ ಬಗ್ಗೆ ತೀಕ್ಷ್ಣ ರಾಜಕೀಯ ಹೇಳಿಕೆ ನೀಡಿದ್ದಾರೆ. ಡಿಎಂಕೆ ಪಕ್ಷದ ಕಾರ್ಯಕರ್ತರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram