ತುಮಕೂರು: ಕಾಂಗ್ರೆಸ್‍ನವರ ಸಹವಾಸ ಮಾಡಿದ್ದಕ್ಕೆ ಜನ ನನ್ನನ್ನು ಒಪ್ಪಿಕೊಂಡಿಲ್ಲ. ನನ್ನ ಕಾರ್ಯಕರ್ತರೇ ಒಪ್ಪಿಕೊಂಡಿಲ್ಲ. ಹೀಗಾಗಿ ಶಿರಾ ಜನರು ನನಗೆ ವಿಷ ಕೊಡ್ತಿರೋ ಹಾಲು ಕೊಡ್ತಿರೋ ನಿಮಗೆ ಬಿಟ್ಟಿದ್ದು. ಇಲ್ಲಿಂದ ಹೊಸ ರಾಜಕೀಯ ಆರಂಭವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಶಿರಾ ಕ್ಷೇತ್ರದಲ್ಲಿ ಭಾವನಾತ್ಮಕವಾಗಿ ಮಾತನಾಡುವ ಮೂಲಕ ಮತದಾರರ ಓಲೈಕೆಗೆ ಮುಂದಾಗಿದ್ದಾರೆ.
ಶಿರಾ ಪಟ್ಟಣದಲ್ಲಿ ಉಪಚುಣಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಶಿರಾದಿಂದ ಹೊಸ ರಾಜಕೀಯ ಆರಂಭವಾಗಬೇಕಿದೆ. ಮುಂದಿನ ರಾಜಕೀಯ ಹೋರಾಟಕ್ಕೆ ಈ ಉಪಚುನಾವಣೆ ಅಗ್ನಿ ಪರೀಕ್ಷೆಯಾಗಿದೆ. ಇನ್ನೆರಡು ದಿನಗಳಲ್ಲಿ ಕಾರ್ಯಕರ್ತರನ್ನು ಕರೆದು ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು. ಎಲ್ಲರೂ ಒಟ್ಟಿಗೆ ಸೇರಿ ಚುನಾವಣೆ ಎದುರಿಸಿ ಎಂದರು.
ತಮ್ಮ ಭಾಷಣದುದ್ದಕ್ಕೂ ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್‍ಡಿಕೆ, ಉಪಚುನಾವಣೆಯಲ್ಲಿ ಜೆಡಿಎಸ್ ಗೆಲ್ಲಬೇಕೆಂದು ಕಾರ್ಯಕರ್ತರು ಪಣತೊಟ್ಟಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಬಹಳ ವೇಗದಲ್ಲಿ ಹೊರಟಿದ್ದು, ಎರಡೂ ಪಕ್ಷಗಳನ್ನು ಶಿರಾ ಕ್ಷೇತ್ರದ ಜನತೆ ತಿರಸ್ಕರಿಸಬೇಕು ಎಂದು ಹೇಳಿದ್ದಾರೆ.
ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ
ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...








