ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

Shwetha by Shwetha
September 20, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ನಡುವಿನ ಜಟಾಪಟಿ ಈಗ ತಾರಕಕ್ಕೇರಿದೆ. ಹರಿಪ್ರಸಾದ್ ಅವರನ್ನು ಹುಚ್ಚ ಎಂದು ಕರೆದಿದ್ದ ರೆಡ್ಡಿ ಅವರಿಗೆ, ಹರಿಪ್ರಸಾದ್ ಈಗ ಅತ್ಯಂತ ತೀಕ್ಷ್ಣವಾದ ಶಬ್ದಗಳಿಂದಲೇ ತಿರುಗೇಟು ನೀಡಿದ್ದಾರೆ. ಈ ಮೂಲಕ ಗಣಿ ಧಣಿ ಮತ್ತು ಹಿರಿಯ ರಾಜಕಾರಣಿಯ ನಡುವಿನ ಕಿತ್ತಾಟ ಬೀದಿಗೆ ಬಂದಿದೆ.

ವಂದೇ ಮಾತರಂ ಹಾಡಲು ಬರುತ್ತಾ?

Related posts

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

September 20, 2026
ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

September 20, 2026

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಬಿ ಕೆ ಹರಿಪ್ರಸಾದ್, ಜನಾರ್ದನ ರೆಡ್ಡಿ ಅವರ ದೇಶಭಕ್ತಿಯನ್ನೇ ಪ್ರಶ್ನಿಸಿದ್ದಾರೆ. ಅಷ್ಟು ದೊಡ್ಡ ದೇಶಪ್ರೇಮಿ ಎಂದು ಹೇಳಿಕೊಳ್ಳುವ ಜನಾರ್ದನ ರೆಡ್ಡಿಗೆ ವಂದೇ ಮಾತರಂ ಗೀತೆಯ ಎರಡು ಪ್ಯಾರಾ ಆದ್ರೂ ಹಾಡೋಕೆ ಬರುತ್ತಾ ಎಂದು ಸವಾಲು ಹಾಕಿದ್ದಾರೆ. ನಾವು ಹುಚ್ಚರಿಗೆಲ್ಲ ಉತ್ತರ ಕೊಡುತ್ತಾ ಕೂರುವುದಿಲ್ಲ. ದೇಶದ ಆಸ್ತಿಯನ್ನು ಲೂಟಿ ಮಾಡಿ, ಜೈಲಿಗೆ ಹೋಗಿ ಬಂದವರಿಂದ ನಾನು ಪಾಠ ಕಲಿಯಬೇಕಿಲ್ಲ ಎಂದು ಅತ್ಯಂತ ಕಠೋರವಾಗಿ ನುಡಿದಿದ್ದಾರೆ.

ಗಣಿ ಕಳ್ಳನಿಗೆ ನನ್ನ ಉತ್ತರ ಇಲ್ಲ

ತಮ್ಮ ರಾಜಕೀಯ ಜೀವನದ ಹೋರಾಟವನ್ನು ನೆನಪಿಸಿಕೊಂಡ ಹರಿಪ್ರಸಾದ್, ನಾನು ಜನಾರ್ದನ ರೆಡ್ಡಿ ತರಹ ಸರ್ಕಾರದ ಗಣಿಯನ್ನು ಲೂಟಿ ಮಾಡಿ ಜೈಲು ಪಾಲಾದವನಲ್ಲ. ಕಷ್ಟಪಟ್ಟು ರಾಜಕೀಯ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಇವರಿಗೆಲ್ಲ ಉತ್ತರ ಕೊಟ್ಟರೆ ನಾವೂ ಹುಚ್ಚರಾಗುತ್ತೇವೆ. ಇವರಿಗೆ ಅಷ್ಟೊಂದು ದೇಶಪ್ರೇಮವಿದ್ದರೆ ಖಾಕಿ ಚಡ್ಡಿ ಮತ್ತು ಕರಿ ಟೋಪಿ ಹಾಕಿಕೊಂಡು ಶಾಖೆಯಲ್ಲಿ ರಾಷ್ಟ್ರಗೀತೆ ಹೇಳಲಿ ಎಂದು ಆರ್‌ಎಸ್‌ಎಸ್ ಉಲ್ಲೇಖಿಸಿ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ಪೊಲಿಟಿಕಲ್ ಅಫೇರ್ಸ್ ಕಮಿಟಿ ಶೀಘ್ರ ರಚನೆ ಇದೇ ಸಂದರ್ಭದಲ್ಲಿ ಪಕ್ಷದ ಸಂಘಟನೆಯ ಬಗ್ಗೆಯೂ ಮಾತನಾಡಿದ ಹರಿಪ್ರಸಾದ್, ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ನಡುವೆ ಉತ್ತಮ ಸಮನ್ವಯ ಸಾಧಿಸಲು ಪೊಲಿಟಿಕಲ್ ಅಫೇರ್ಸ್ ಕಮಿಟಿಯನ್ನು ಶೀಘ್ರದಲ್ಲೇ ರಚಿಸಲಾಗುವುದು ಎಂದು ತಿಳಿಸಿದರು. ಹೈಕಮಾಂಡ್ ನಾಯಕರಾದ ಕೆ ಸಿ ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರು ಈ ಬಗ್ಗೆ ಸೂಚನೆ ನೀಡಿದ್ದಾರೆ. ಈಗಾಗಲೇ ರಾಜ್ಯದ ಎಲ್ಲಾ ಹಿರಿಯ ನಾಯಕರ ಸಲಹೆಗಳನ್ನು ಪಡೆಯಲಾಗುತ್ತಿದ್ದು, ಶೀಘ್ರದಲ್ಲೇ ಸಮಿತಿ ಅಸ್ತಿತ್ವಕ್ಕೆ ಬರಲಿದೆ ಎಂದು ಅವರು ಮಾಹಿತಿ ನೀಡಿದರು.

ShareTweetSendShare
Join us on:

Related Posts

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

by Shwetha
September 20, 2026
0

ಕರಾವಳಿ ಪ್ರವಾಸದಲ್ಲಿದ್ದಾಗ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಶುಕ್ರವಾರ ಬೆಳ್ಳಂಬೆಳಗ್ಗೆ ಮಂಗಳೂರಿನ ಹಳೆ ಬಂದರಿನ ಮೀನುಗಾರಿಕಾ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ತೀವ್ರ ಆಕ್ರೋಶ...

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

by Shwetha
September 20, 2026
0

ಡಿಜಿಟಲ್ ಇಂಡಿಯಾದತ್ತ ದಾಪುಗಾಲು ಹಾಕುತ್ತಿರುವ ಸಾಮಾನ್ಯ ಜನರಿಗೆ ಈಗ ಕೇಂದ್ರದ ಹೊಸ ನಿಯಮವೊಂದು ಶಾಕ್ ನೀಡಿದೆ. ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ ಯುಪಿಐ ಸೇವಾ ಶುಲ್ಕದ ನಿಯಮವು...

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

by Shwetha
September 20, 2026
0

ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸವನ್ನು ಹೆಚ್ಚು ಸುರಕ್ಷಿತಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಲೇಜುಗಳು ಆಯೋಜಿಸುವ ಶೈಕ್ಷಣಿಕ ಪ್ರವಾಸಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

by Shwetha
September 20, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಮಾಲೀಕತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ ವತಿಯಿಂದ ಅಕ್ರಮವಾಗಿ ನಿವೇಶನ ಮಂಜೂರು...

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

by Shwetha
September 20, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿವಿಧ ಕಾರ್ಯಕ್ರಮಗಳ ನಿಮಿತ್ತ ತುಮಕೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಕ್ಯಾತಸಂದ್ರ ನಿವಾಸಕ್ಕೆ ತೆರಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram