ಬೆಂಗಳೂರು, ಜೂನ್ 8: ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಎಸ್ ಎಸ್ ಎಲ್ ಸಿ, ಫಾರ್ಮಸಿ, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ರದ್ದುಮಾಡಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಬೇಕು ಎಂದು ಒತ್ತಾಯಿಸಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ತೀವ್ರ ಒತ್ತಡಕ್ಕೆ ಸಿಲುಕಿದ್ದು ಪರೀಕ್ಷೆ ಬರೆಯಲು ಸಾಧ್ಯವಾಗದ ಪರಿಸ್ಥಿತಿ ಸೃಷ್ಟಿಯಾಗಿದೆ. ಆದ್ದರಿಂದ ತರಗತಿಯಲ್ಲಿನ ವಿದ್ಯಾರ್ಥಿಗಳ ಕಲಿಕಾ ಮಾನದಂಡವನ್ನು ಪರಿಗಣಿಸಿ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಈಗಾಗಲೇ ಕಾನ್ಪುರ ಐಐಟಿ ಸೇರಿದಂತೆ 12 ರಾಜ್ಯಗಳು ಕೊರೊನಾ ಸೋಂಕಿನ ಭೀತಿಯಿಂದ ಅಂತಿಮ ವರ್ಷವನ್ನು ಹೊರತು ಪಡೆಸಿ ಉಳಿದ ಪದವಿ ಪರೀಕ್ಷೆಯನ್ನು ರದ್ದುಗೊಳಿಸಿವೆ. ಕರ್ನಾಟಕದಲ್ಲೂ ಎಂಜಿನಿಯರಿಂಗ್ , ಫಾರ್ಮಸಿ, ಡಿಪ್ಲೊಮ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಉತ್ತೀರ್ಣಗೊಳಿಸಬೇಕೆಂದು ಆಗ್ರಹಿಸಿದರು.
ಈಗಾಗಲೇ ಎಲ್ಲೆಡೆಯೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿದ್ದು, ಪರೀಕ್ಷೆ ಬರೆಯಲು ಹಾಜರಾಗುವ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹರಡಿದರೆ ಅದು ಮತ್ತಷ್ಟು ಅನಾಹುತಕ್ಕೆ ಕಾರಣವಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳ ಕಲಿಕಾ ಮಾನದಂಡ ಪರಿಗಣಿಸಿ ತೇರ್ಗಡೆ ಮಾಡುವುದೇ ಒಳ್ಳೆಯದು ಎಂದು ಹೇಳಿದರು.
ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿರುವ ಕೆಎಂಎಫ್ ನ ನಂದಿನಿ ಬ್ರ್ಯಾಂಡ್ ಇದೀಗ ಕ್ರಿಕೆಟ್ ಜಗತ್ತಿನ ರಣಕಣಕ್ಕೆ ಇಳಿದಿದೆ. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...








