ಕಲಬುರಗಿ: ರಾಜ್ಯದಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರ ಸ್ಥಿಗಿತವಾದ ಹಿನ್ನೆಲೆಯಲ್ಲಿ ಕನ್ನಡಿಗರು ಪರದಾಡುವಂತಾಗಿದೆ.
ಇದರಿಂದಾಗಿ ತುಳಜಾಪುರದ ಅಂಬಾಭವಾನಿ ದೇವಿ ದರ್ಶನಕ್ಕೆ ತೆರಳಿದ ನೂರಾರು ಕನ್ನಡಿಗರು ಪರದಾಡುವ ಸ್ಥಿತಿ ಅನುಭವಿಸಿದ್ದಾರೆ. ಮಕ್ಕಳು ಹಾಗೂ ವೃದ್ಧರು ತುಳಜಾಪುರದ ಬಸ್ ನಿಲ್ದಾಣದಲ್ಲಿಯೇ ಕುಳಿತಿದ್ದಾರೆ. ನಮ್ಮ ಊರಿಗೆ ಹೋಗಲು ಬಸ್ ಬಿಡಿ ಎಂದು ಮಹಿಳೆಯರು ಆಗ್ರಹಿಸುತ್ತಿದ್ದಾರೆ.
ಫ್ರೀ ಬಸ್ ಎಂಬ ಕಾರಣಕ್ಕೆ ಹೆಚ್ಚಿನ ದುಡ್ಡು ಕೂಡ ತಂದಿಲ್ಲ. ಖಾಸಗಿ ವಾಹನದವರು 500 – 600 ರೂ. ಹಣವನ್ನು ಕೇಳುತ್ತಿದ್ದಾರೆ. ಹೀಗಾಗಿ ಬಸ್ ಬಿಡಿ ಎಂದು ಮಹಿಳೆಯರು ಮನವಿ ಮಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಹೋರಾಟ ನಡೆಯುತ್ತಿದ್ದು, ದುಷ್ಕರ್ಮಿಗಳು ಸೋಮವಾರ ಬೀದರ್ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಬಸ್ ಗೆ ಬೆಂಕಿ ಹಚ್ಚಿದ್ದರು. ಹೀಗಾಗಿ ಬಸ್ ಸೇವೆ ನಿಲ್ಲಿಸಲಾಗಿತ್ತು.








