ಮಹಿಳೆಯರಿಗೆ ಚಾಲನಾ ಪರವಾನಗೆ ರದ್ದು
ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಜಾರಿಯಲ್ಲಿದ್ದು, ಸದ್ಯ ಸರಕಾರ ಮಹಿಳೆಯರಿಗೆ ಚಾಲನಾ ಪರವಾನಗಿಯನ್ನೂ ನಿಷೇಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಹಿಂದೆ ಮಹಿಳೆಯರ ಶಿಕ್ಷಣವನ್ನು 6ನೇ ತರಗತಿವರೆಗೆ ನಿರ್ಬಂಧಿಸಿ ಆದೇಶ ಹೊರಡಿಸಿತ್ತು. ಬಳಿಕ ಇದೀಗ. ಕಾಬೂಲ್ ಮತ್ತು ಇತರ ಪ್ರಾಂತ್ಯಗಳಲ್ಲಿ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ನೀಡುವುದನ್ನು ನಿಲ್ಲಿಸಲಾಗಿದೆ.
ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮುಂದುವರಿದಿದೆ. ಅದರಲ್ಲೂ ಮಹಿಳೆಯರ ವಿರುದ್ಧ ಇನ್ನಿಲ್ಲದ ನಿಯಮಗಳನ್ನು ಜಾರಿ ಮಾಡುತ್ತಲೇ ಇದೆ. ಮಹಿಳೆಯರಿಗೆ ಆರನೇ ತರಗತಿಗಿಂತ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹೋಗುವುದನ್ನು ನಿಷೇಧಿಸಿತ್ತು.
ಇದು ವಿಶ್ವಾದ್ಯಂತ ಖಂಡನೆಗೆ ಕಾರಣವಾಗಿತ್ತಿದ್ದಂತೆ ಶಿಕ್ಷಕರ ಕೊರತೆಯ ಕಾರಣ ಈ ರೀತಿ ಮಾಡಲಾಗಿದೆ. ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಬಯಸುವ ಹೆಣ್ಣುಮಕ್ಕಳಿಗೆ ಅವಕಾಶ ನೀಡಲಾಗುವುದು ಎಂದು ಸರ್ಕಾರ ತಿಳಿಸಿತ್ತು.








