ಮಾಸ್ಕೋ: ರಷ್ಯಾ ಆರೋಗ್ಯ ಸಚಿವಾಲಯವು (Russian Ministry of Health) ಕ್ಯಾನ್ಸರ್ ಲಸಿಕೆ ಅಭಿವೃದ್ಧಿಪಡಿಸಿದ ಕುರಿತು ಘೋಷಿಸಿದ್ದು, ತನ್ನ ದೇಶದ ನಾಗರಿಕರಿಗೆ ಉಚಿತವಾಗಿ ಸಿಗಲಿದೆ ಎಂದು ಹೇಳಿದೆ.
ಕ್ಯಾನ್ಸರ್ ಲಸಿಕೆ (mRNA ಲಸಿಕೆ) ತಯಾರಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ನಿರ್ದೇಶಕ ಆಂಡ್ರೇ ಕಪ್ರಿನ್ ತಿಳಿಸಿದ್ದಾರೆ. ಅಲ್ಲದೇ, ಮುಂದಿನ ವರ್ಷ ರಷ್ಯಾದ ನಾಗರಿಕರಿಗೆ ಈ ಕ್ಯಾನ್ಸರ್ ಲಸಿಕೆಯನ್ನು (Cancer Vaccine) ಉಚಿತವಾಗಿ ನೀಡಲಾಗುವುದು ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರು ಕ್ಯಾನ್ಸರ್ ಲಸಿಕೆ ಕಂಡು ಹಿಡಿಯುವ ಹಂತ ಕೊನೆಗೊಳ್ಳಲಿದೆ ಎಂದಿದ್ದರು.
mRNA ಅಥವಾ ಮೆಸೆಂಜರ್ ಆರ್‌ಎನ್‌ಎ ಎಂಬುದು ಮಾನವನ ಆನುವಂಶಿಕ ಸಂಕೇತದ ಒಂದು ಸಣ್ಣ ಭಾಗವಾಗಿದೆ. ಇದು ನಮ್ಮ ಜೀವಕೋಶಗಳಲ್ಲಿ ಪ್ರೋಟೀನ್‌ಗಳನ್ನು ಉತ್ಪಾದಿಸುತ್ತದೆ. ವೈರಸ್ ಅಥವಾ ಬ್ಯಾಕ್ಟೀರಿಯಾವು ನಮ್ಮ ದೇಹವನ್ನು ಆಕ್ರಮಿಸಿದಾಗ, ಅದರ ವಿರುದ್ಧ ಹೋರಾಡಲು ಸಹಾಯಕವಾಗುವ ಪ್ರೋಟೀನ್‌ಗಳನ್ನು ಉತ್ಪಾದಿಸಲು mRNA ಸಹಾಯ ಮಾಡುತ್ತದೆ ಎನ್ನಲಾಗಿದೆ.ಇದು ಅಗತ್ಯವಾದ ಪ್ರೋಟೀನ್‌ಗಳನ್ನು ಪಡೆಯುತ್ತವೆ, ಪ್ರತಿಕಾಯ (ಆಂಟಿಬಾಡಿ) ರೂಪುಗೊಳ್ಳುತ್ತವೆ. ಇದರೊಂದಿಗೆ ರೋಗನಿರೋಧಕ ಶಕ್ತಿತಯೂ ಬಲಗೊಳ್ಳುತ್ತದೆ.







