ದಾವಣಗೆರೆ: ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ದಾವಣಗೆರೆ (Davanagere) ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹಾವೇರಿ (Haveri) ಜಿಲ್ಲೆಯ ಹೊಸರಿತ್ತಿ ಗ್ರಾಮದ ಅರುಣ್ ಶೆಟ್ಟರ್ (50) ಹಾಗೂ ತಾಯಿ ವಿಜಯಲಕ್ಷ್ಮಿ ಶೆಟ್ಟರ್ (70) ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕುಟುಂಬಸ್ಥರೆಲ್ಲ ಸೇರಿ ಮದುವೆಗೆಂದು ತುಮಕೂರಿಗೆ (Tumakuru) ಹೋಗಿ ಮರಳಿ ಬರುತ್ತಿದ್ದಾಗ ಶಿರಮಗೊಂಡನಹಳ್ಳಿ ಸೇತುವೆ ಮೇಲೆ ವೇಗವಾಗಿ ಬಂದು ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.