ನಸುಕಿನ ಜಾವ ಕುಣಿಗಲ್ ಬಳಿ ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು…
ಇಂದು ನಸುಕಿನ ಜಾವ ಕಾರು ಹಾಗೂ ಟಿಟಿ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.
ಕುಣಿಗಲ್ ತಾಲೂಕಿನ ಬೆಗೂರು ಬೈಪಾಸ್ ಬಳಿ ಕಾರು- ಟಿಟಿ ವಾಹನ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಕಾರಿನಲ್ಲಿದ್ದ ರಘು(27) ಸಂತೋಷ (21) ಮೃತಪಟ್ಟಿದ್ದಾರೆ. ಮೃತರು ಬೆಂಗಳೂರಿನ ಸಂಜಯ್ ನಗರದ ವಾಸಿಗಳಾಗಿದ್ದಾರೆ. ಇನ್ನೂಳಿದಂತೆ ವಿಜಯ್ (30) ಸ್ಥಿತಿ ಗಂಭೀರವಾಗಿದ್ದು, ಟಿಟಿ ವಾಹನದಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಟಿ.ಟಿ. ವಾಹನ ಧರ್ಮಸ್ಥಳದ ಕಡೆಗೆ ಹೋಗುತ್ತಿತ್ತು. ಈ ಸಂದರ್ಭದಲ್ಲಿ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ವಾಪಸ್ ಹೋಗುತ್ತಿದ್ದ ಕಾರೊಂದು ಡಿವೈಡರ್ ದಾಟಿ ಟಿ.ಟಿ. ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ಕುಣಿಗಲ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.
Car and TT accident : 2 dead at Tumkur








