ವಿಟ್ಲ : ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಹೊಂಡಕ್ಕಿಳಿದ ಘಟನೆ ವಿಟ್ಲದ ವೀರಕಂಭದಲ್ಲಿ ನಡೆದಿದೆ. ಘಟನೆಯಲ್ಲಿ ವೀರಕಂಭ ನಿವಾಸಿ ಐತ್ತಪ್ಪ ಗೌಡ ಎಂಬುವವರ ಪತ್ನಿ ಧರ್ಮಾವತಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಧರ್ಮಾವತಿ ಅವರು ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಘಟನೆಯ ಬಳಿಕ ಕಾರು ಚಾಲಕ ಪರಾರಿ ಆಗಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...








