ಧಾರವಾಡ: ನದಿಯಲ್ಲಿ ಕಾರು ತೇಲಿಕೊಂಡು ಹೋಗಿರುವ ಘಟನೆ ನಡೆದಿದೆ. ಆದರೆ, ಚಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಲಾಗಿದೆ.
ತುಂಬಿ ಹರಿಯುತ್ತಿದ್ದ ಶಾಲ್ಮಲಾ ನದಿಗೆ (Shalmala River) ಕಾರು ಸಮೇತ ಚಾಲಕ ಬಿದ್ದಿದ್ದಾನೆ. ಆಗ ಸಿಲುಕಿದ್ದ ಚಾಲಕನನ್ನು ರಕ್ಷಿಸುವಲ್ಲಿ ಅಗ್ನಿ ಶಾಮಕದಳದ ಸಿಬ್ಬಂದಿ ಹಾಗೂ ಸಾರ್ವಜನಿಕರು ಯಶಸ್ವಿಯಾಗಿದ್ದಾರೆ. ಧಾರವಾಡ (Dharawada) ಜಿಲ್ಲೆಯ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ-ಬೇಗೂರು ಗ್ರಾಮದ ಮಧ್ಯೆ ಈ ಘಟನೆ ನಡೆದಿದೆ.
ಧಾರವಾಡ ತಾಲೂಕಿನ ಪುಡಕಲಕಟ್ಟಿ ಗ್ರಾಮದ ನಾಗರಾಜ ದೇಮಣ್ಣವರ ಬೇಗೂರು ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ನೀರಿನ ರಭಸಕ್ಕೆ ಕಾರು ಸಮೇತ ಕೊಚ್ಚಿ ಹೋಗಿದ್ದರು. ಆಗ, ಕೊಚ್ಚಿ ಹೋಗುತ್ತಿದ್ದ ವೇಳೆ ಅವರು ಮರ ಏರಿದ್ದಾರೆ. ಹೀಗಾಗಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಮನಿಸಿದ ಸ್ಥಳೀಯರು ಅಗ್ನಿ ಶಾಮಕದಳಕ್ಕೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ.








