ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬಾಳೆಕಾಡು ಕೆರೆಗೆ ಪಲ್ಟಿಯಾದ ಪರಿಣಾಮ ತಾಯಿ-ಮಗಳು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಸೋಮವಾರ ಪೇಟೆ ತಾಲೂಕಿನ ಸುಂಟಿಕೊಪ್ಪ ಬಳಿ ಕಳೆದ ರಾತ್ರಿ ನಡೆದಿದೆ.
ಮಡಿಕೇರಿಯಲ್ಲಿ ಅರಣ್ಯ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿರುವ ವೆಂಕಟೇಶ್ ಎಂಬುವರು ಪತ್ನಿ ಬಬಿತಾ ಮತ್ತು ಮಗಳೊಂದಿಗೆ ಮಡಿಕೇರಿಯಿಂದ ಕುಶಾಲನಗರ ಕಡೆಗೆ ಕಾರಿನಲ್ಲಿ ಬರುತ್ತಿದ್ದರು. ಸೋಮವಾರ ಪೇಟೆ ತಾಲೂಕಿನ ಸುಂಟಿಕೊಪ್ಪ ಬಳಿ ತಡರಾತ್ರಿ ವೇಳೆ ಕಾರಿನಲ್ಲಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಬಾಳೆಕಾಡು ಕೆರೆಗೆ ಉರುಳಿದೆ. ಕಾರು ಕೆರೆಗೆ ಉರುಳುತ್ತಿದ್ದಂತೆ ವೆಂಕಟೇಶ್ ಈಜಿ ದಡ ಸೇರಿದ್ದಾರೆ. ಆದರೆ, ಕೆರೆಯ ನೀರಿನಲ್ಲಿ ಕಾರು ಮುಳುಗಿದ್ದ ಪರಿಣಾಮ ವೆಂಕಟೇಶ್ ಪತ್ನಿ ಬಬಿತ ಮತ್ತು ಮಗಳು ಪಲ್ಲವಿ ಹೊರಬರಲಾಗದೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಕ್ರೇನ್ ಬಳಸಿ ಕೆರೆಯಿಂದ ಕಾರನ್ನು ಮೇಲಕ್ಕೆ ಎತ್ತಿ ಮೃತದೇಹ ಹೊರ ತೆಗೆದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel