ಕಲಬುರಗಿ : ಕಾರಿನ ಚಕ್ರ ಸ್ಫೋಟಗೊಂಡ ಪರಿಣಾಮ ಹೆಡ್ಕಾನ್ಸ್ಟೇಬಲ್ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಸೇಡಂನಲ್ಲಿ ನಡೆದಿದೆ. ಸಾವನ್ನಪ್ಪಿರುವ ಮೊಯಿಜುದ್ದೀನ್(52) ಹೆಡ್ ಕಾನ್ಸ್ ಟೇಬಲ್, ಅಶೋಕ್ ನಗರ ಪೊಲಿಸ್ (Police) ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಪಲ್ಟಿಯಾದ ಕಾರಿನಲ್ಲಿ ಮೂವರು ಪ್ರಯಾಣ ನಡೆಸುತ್ತಿದ್ದರು ಎನ್ನಲಾಗಿದ್ದು, ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊಯಿಜುದ್ದೀನ್ ಸಹೋದರ ನಿಜಮುದ್ದೀನ್ ಮತ್ತು ಇನ್ನೋರ್ವ ವ್ಯಕ್ತಿ ಕಾರಿನಲ್ಲಿದ್ದರು ಎನ್ನಲಾಗಿದೆ. ಈ ಕುರಿತು ಮಳಖೇಡ್ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ








