ವಾಷಿಂಗ್ಟನ್: ಕಾರ್ಗೋ ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಸೇತುವೆ ಮುರಿದು ಬಿದ್ದಿರುವ ಘಟನೆ ನಡೆದಿದೆ.
ಈ ಘಟನೆ ಅಮೆರಿಕದ ಬಾಲ್ಟಿ ಮೋರ್ ನಲ್ಲಿ ನಡೆದಿದೆ. ಹಡಗು ಸೇತುವೆಗೆ ಡಿಕ್ಕಿ ಹೊಡೆದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಗ್ನಿಶಾಮಕ ದಳ, ಪೊಲೀಸರು ಸದ್ಯ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ನೀರಿಗೆ ಬಿದ್ದ ಹಲವರು ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಸಿಂಗಾಪುರ ಮೂಲದ ಸರಕು ಸಾಗಾಣೆ ಹಡಗು ಗುದ್ದಿದ್ದು, 20ಕ್ಕೂ ಅಧಿಕ ಕಾರುಗಳು ಕೂಡ ನೀರಿಗೆ ಬಿದ್ದಿವೆ. ತಾಂತ್ರಿಕ ವೈಫಲ್ಯದಿಂದ ಈ ಘಟನೆ ನಡೆದಿದೆಯಾ ಅಥವಾ ಉಗ್ರರ ಕೃತ್ಯ ಇರಬಹುದೇ ಎಂಬ ದೃಷ್ಟಿ ಕೋನದಲ್ಲಿ ತನಿಖೆ ನಡೆಯುತ್ತಿದೆ.
1977 ರಲ್ಲಿ ಸೇತುವೆ ನಿರ್ಮಿಸಲಾಗಿತ್ತು.