ಭಾರತದ ಭೂಪಟ ತಪ್ಪಾಗಿ ಪ್ರಕಟಿಸಿದ್ದ ಟ್ವಿಟರ್ ನ ಎಂಡಿ ವಿರುದ್ಧ ಪ್ರಕರಣ ದಾಖಲು
ಭಾರತದ ಭೂಪಟ ತಪ್ಪಾಗಿ ಪ್ರಕಟಿಸಿದ್ದ ಹಿನ್ನೆಲೆ ಜನಪ್ರಿಯ ಸಾಮಾಜಿಕ ಜಾಲತಾಣ ಸಂಸ್ಥೆ ಟ್ವಿಟರ್ ನ ಭಾರತದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ವಿರುದ್ಧ ಪ್ರಕರಣ ದಾಖಲಾಗಿದೆ. ಅಂದ್ಹಾಗೆ ಟ್ವಿಟರ್, ಭಾರತದ ನಕ್ಷೆಯನ್ನು ತಪ್ಪಾಗಿ ತೋರಿಸುತ್ತಿರುವುದು ಇದು ಎರಡನೇ ಬಾರಿ. ಈ ಹಿಂದೆ ಲೇಹ್ ಅನ್ನು ಚೀನಾದ ಭಾಗವೆಂದು ತೋರಿಸಿತ್ತು. ಬುಲಂದ್ ಶಹರ್‌ನಲ್ಲಿರುವ ಭಜರಂಗದಳದ ಮುಖಂಡರ ದೂರಿನ ಮೇರೆಗೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 505 (2) ಮತ್ತು ಐಟಿ (ತಿದ್ದುಪಡಿ) ಕಾಯ್ದೆ 2008 ರ ಸೆಕ್ಷನ್ 74 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ರಾಷ್ಟ್ರೀ ಸುದ್ದಿ ವಾಹಿನಿ ವರದಿ ಮಾಡಿದೆ..
ಟ್ವಿಟರ್‌ನಲ್ಲಿ ಪ್ರಕಟಿಸಿದ್ದ ತಪ್ಪಾದ ಭಾರತದ ಭೂಪಟದಲ್ಲಿ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತ್ಯೇಕ ದೇಶಗಳು ಎಂದು ತೋರಿಸುತ್ತಿದ್ದರಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಟ್ವಿಟರ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಟ್ವಿಟ್ಟರ್ ಸಂಸ್ಥೆ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿತ್ತು. ಬಳಿಕ ಟ್ವಿಟರ್ ಈ ತಪ್ಪಾದ ಭೂಪಟವನ್ನು ತೆಗೆದುಹಾಕಿತ್ತು. ಈ ಕುರಿತಂತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧಿಕಾರಿಗಳು ಸಹ ಟ್ವಿಟರ್ ಸಂಸ್ಥೆಗೆ ವಿವರಣೆ ಕೋರಿ ನೋಟಿಸ್ ನೀಡಲು ನಿರ್ಧರಿಸಿರುವುದಾಗಿ ತಿಳಿಸಿದೆ.
ವಿಶೇಷಚೇತನರಿಗೆ ಬಡ್ತಿಯಲ್ಲಿ ಮೀಸಲಾತಿ ನಿರಾಕರಿಸಲಾಗದು – ಸುಪ್ರೀಂ ಕೋರ್ಟ್
ಭಾರತದ ಬಹುನಿರೀಕ್ಷೆಯ ಸಿನಿಮಾಗಳ ಪಟ್ಟಿ ರಿಲೀಸ್ – ನಂ 1 ಸ್ಥಾನ ಯಾವ ಸಿನಿಮಾಗೆ..? ಟಾಪ್ 3 ನಲ್ಲಿ ಬಾಲಿವುಡ್ ಗೆ ಜಾಗವಿಲ್ಲ..!
ಇದು ಪ್ಯಾಕೇಜ್ ಅಲ್ಲ, ಮತ್ತೊಂದು ಸುಳ್ಳು : ರಾಹುಲ್ ಗಾಂಧಿ
ಜಮ್ಮುಕಾಶ್ಮೀರದಲ್ಲಿ ಗುಂಡಿನ ಚಕಮಕಿ : ಇಬ್ಬರು ಉಗ್ರರು ಸಾವು
ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 37,566 ಮಂದಿಗೆ ಸೋಂಕು