ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಬ್ಯಾಂಕ್ ವಂಚನೆ ಪ್ರಕರಣ- ಬಿಜೆಪಿ ಮುಖಂಡ ಮೋಹಿತ್ ಕಾಂಬೋಜ್ ವಿರುದ್ಧ ಪ್ರಕರಣ ದಾಖಲು

admin by admin
June 18, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬ್ಯಾಂಕ್ ವಂಚನೆ ಪ್ರಕರಣ- ಬಿಜೆಪಿ ಮುಖಂಡ ಮೋಹಿತ್ ಕಾಂಬೋಜ್ ವಿರುದ್ಧ ಪ್ರಕರಣ ದಾಖಲು

ಹೊಸದಿಲ್ಲಿ, ಜೂನ್ 18: ಭಾರತೀಯ ಜನತಾ ಪಕ್ಷದ ಮುಖಂಡ ಮೋಹಿತ್ ಕಾಂಬೋಜ್, ಅಲಿಯಾಸ್ ಮೋಹಿತ್ ಭಾರತೀಯ ಮತ್ತು ಇತರ ನಾಲ್ವರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಬ್ಯಾಂಕ್ ವಂಚನೆ ಪ್ರಕರಣ ದಾಖಲಿಸಿದೆ. ಶ್ರೀ ಕಾಂಬೋಜ್ ಈ ಪ್ರಕರಣದಲ್ಲಿ ತನ್ನ ಸಾಲವನ್ನು ಒಂದೇ ಬಾರಿ ಇತ್ಯರ್ಥಪಡಿಸುವ ಸಲುವಾಗಿ 30 ಕೋಟಿ ರೂ ಗೆ ಸಲ್ಲಿಸಿದ ದಾಖಲೆಗಳಲ್ಲಿ ವ್ಯತ್ಯಾಸಗಳಿವೆ ಎಂದು ಬ್ಯಾಂಕ್ ಹೇಳಿದೆ. ಕೆಲವು ಬ್ಯಾಂಕ್ ಅಧಿಕಾರಿಗಳ ಪಾತ್ರವನ್ನೂ ಪರಿಶೀಲಿಸಲಾಗುತ್ತಿದೆ. ಇದೀಗ ಸಿಜೆಐ ಬಿಜೆಪಿ ನಾಯಕ, ಇತರ ನಾಲ್ವರ ವಿರುದ್ಧ 67 ಕೋಟಿ ರೂ ವಂಚನೆ ಪ್ರಕರಣ ಧಾಖಲಿಸಲು ಸಿ ಬಿ ಐ ನಿರ್ಧಾರ ಮಾಡಿದೆ. ಮೋಹಿತ್ ಕಾಂಬೋಜ್ ಬಿಜೆಪಿ ಮುಂಬೈ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

Related posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026

ಏನಿದು ಪ್ರಕರಣ:

ತಮ್ಮ ಕೊನೆಯ ಹೆಸರನ್ನು ಭಾರ್ತಿಯಾ ಎಂದು ಬದಲಾಯಿಸಿರುವ ಶ್ರೀ ಕಾಂಬೋಜ್, ಮೆವ್ಯಾಸ್ ಅವ್ಯಾನ್ ಓವರ್‌ಸೀಸ್ ಪ್ರೈವೇಟ್ ಲಿಮಿಟೆಡ್‌ ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಖಾತರಿಗಾರರಾಗಿದ್ದಾರೆ. ಇವರು 2013 ರಲ್ಲಿ ಬ್ಯಾಂಕ್ ಆಫ್ ಇಂಡಿಯಾದಿಂದ 60 ಕೋಟಿ ರೂ ಸಾಲ ಪಡೆದು, 2018 ರಲ್ಲಿ ಬಾಕಿ ಮೊತ್ತದ ವಿರುದ್ಧ 30 ಕೋಟಿ ರೂ.ಗಳನ್ನು ನೀಡಿ , ಬ್ಯಾಂಕ್ ನ ನಷ್ಟಕ್ಕೆ ಕಾರಣವಾಗಿದ್ದರು. ಅಲ್ಲದೇ ಬ್ಯಾಂಕ್ ಸಲ್ಲಿಸಿದ ಹಣದ ಮೂಲದಲ್ಲಿ ವ್ಯತ್ಯಾಸಗಳನ್ನು ತೋರಿಸಿದ್ದು, ಈ ವಿಷಯದಲ್ಲಿ ಕೆಲವು ಬ್ಯಾಂಕ್ ಅಧಿಕಾರಿಗಳ ಪಾತ್ರವೂ ಇದೆ ಎಂದು ತನಿಖಾ ಸಂಸ್ಥೆಯ ಮೂಲಗಳು ತಿಳಿಸಿವೆ.
ಮಾರ್ಚ್ 2015 ರಲ್ಲಿ, ಕಂಪನಿಯ ಖಾತೆಯನ್ನು ನಿರ್ವಹಿಸದ ಆಸ್ತಿ (ಏನ್.ಪಿ.ಏ ) ಎಂದು ಘೋಷಿಸಲಾಯಿತು. ಆದರೆ ನಿರ್ದೇಶಕರೊಬ್ಬರ ಹೆಸರಿನಲ್ಲಿ ಫ್ಲಾಟ್ ಖರೀದಿಸಲು ಕಂಪನಿಯು ಹಣವನ್ನು ಬೇರೆಡೆಗೆ ತಿರುಗಿಸಿದೆ ಎಂದು ಬ್ಯಾಂಕಿನ ಆಂತರಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಬ್ಯಾಂಕ್ ಸಿಬಿಐಗೆ ನೀಡಿದ ತನ್ನ ದೂರಿನಲ್ಲಿ ತಿಳಿಸಿದೆ. ಕಂಪನಿಯು 2014 ರಿಂದ ತನ್ನ ಹಣಕಾಸು ಹೇಳಿಕೆಗಳನ್ನು ಸಲ್ಲಿಸಿಲ್ಲ ಎಂದು ಬ್ಯಾಂಕ್ ಆರೋಪಿಸಿದೆ.

ಕಂಪನಿಯ ಖಾತೆಯನ್ನು ಎನ್‌ಪಿಎ ಎಂದು ಟ್ಯಾಗ್ ಮಾಡಿದ ನಂತರ ಅದರ ಅನೇಕ ನಿರ್ದೇಶಕರು ರಾಜೀನಾಮೆ ನೀಡಿದ್ದಾರೆ ಎಂದು ಬ್ಯಾಂಕ್ ತಿಳಿಸಿದ್ದು, ರಾಜೀನಾಮೆ ನೀಡಿದವರಲ್ಲಿ 2015 ರ ಮೇ 27 ರಂದು ನಿರ್ಗಮಿಸಿದ ಶ್ರೀ ಕಾಂಬೋಜ್, 2013 ರಲ್ಲಿ ಅಭಿಷೇಕ್ ಕಪೂರ್, 2014 ರಲ್ಲಿ ನರೇಶ್ ಕಪೂರ್ ಮತ್ತು 2016 ರಲ್ಲಿ ಜಿತೇಂದ್ರ ಕಪೂರ್ ಸೇರಿದ್ದಾರೆ. ಕಂಪನಿ, ಅದರ ಪ್ರವರ್ತಕರು ಮತ್ತು ನಿರ್ದೇಶಕರು ಬ್ಯಾಂಕನ್ನು ವಂಚಿಸುವ ಅಪ್ರಾಮಾಣಿಕ ಉದ್ದೇಶದಿಂದ ಕ್ರಿಮಿನಲ್ ಅಪರಾಧ ಮಾಡಿದ್ದಾರೆ ಮತ್ತು ಬ್ಯಾಂಕನ್ನು ನಷ್ಟಕ್ಕೆ ತಳ್ಳಲು ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಆರೋಪಿಗಳು ಮಾಡಿದ ತಪ್ಪಾದ ಕೃತ್ಯವು ಬ್ಯಾಂಕಿಗೆ 67.22 ಕೋಟಿ ರೂ.ಗಳಿಗಿಂತ ಹೆಚ್ಚು ನಷ್ಟವನ್ನುಂಟು ಮಾಡಿದೆ ಎಂದು ಬ್ಯಾಂಕ್ ಆಫ್ ಇಂಡಿಯಾ ಆರೋಪಿಸಿದೆ.

ಬ್ಯಾಂಕಿನ ದೂರಿನ ಆಧಾರದ ಮೇಲೆ ಸಿಬಿಐ ಮೋಹಿತ್ ಕಾಂಬೋಜ್, ಅಭಿಷೇಕ್ ಕಪೂರ್, ನರೇಶ್ ಕಪೂರ್, ಸಿದ್ಧಾಂತ್ ಬಾಗ್ಲಾ, ಇರ್ತೇಶ್ ಮಿಶ್ರಾ, ಮೆ / ಅವ್ಯಾನ್ ಓವರ್ಸೀಸ್ ಪ್ರೈವೇಟ್ ಲಿಮಿಟೆಡ್, ಮೆಸರ್ಸ್ ಕೆಬಿಜೆ ಹೊಟೇಲ್ ವಿರುದ್ಧ ಮೋಸ, ಖೋಟಾ, ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರದ ಪ್ರಕರಣ ದಾಖಲಿಸಿದೆ.
ಆರೋಪಗಳಿಗೆ ಪ್ರತಿಕ್ರಿಯಿಸಿದ ಭಾರತೀಯ ಜನತಾ ಪಕ್ಷದ ಮುಂಬೈ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀ ಕಾಂಬೋಜ್ ಮಾತನಾಡಿ ನಾನು ಸಿಬಿಐ ತನಿಖೆಗೆ ಸಹಕರಿಸುತ್ತೇನೆ. ನಾನು ಅವರನ್ನು ಸಂಪೂರ್ಣವಾಗಿ ನಂಬುತ್ತೇನೆ. ಎಂದು ಹೇಳಿದ್ದಾರೆ.

Tags: bankBJPcbiMohithmumbai
ShareTweetSendShare
Join us on:

Related Posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram