ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಚೋದನಕಾರಿ ಭಾಷಣದ ಆರೋಪದಡಿ ಪ್ರಕರಣ ದಾಖಲಾಗಿದೆ.
ಮದ್ದೂರು ನಗರದ ಪೊಲೀಸ್ ಠಾಣೆಯಲ್ಲಿ BNS ಕಾಯ್ದೆಯ ಸೆಕ್ಷನ್ 196(1)(A) ಅಡಿ ದೂರು ದಾಖಲಾಗಿದ್ದು, ಹಿಂದೂ ಪರ ಸಂಘಟನೆಗಳು ಆಯೋಜಿಸಿದ್ದ ಬಲಿದಾನ್ ದಿವಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಭಾಷಣ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸೋಮವಾರ ಮದ್ದೂರಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಇಬ್ಬರೂ ನಾಯಕರು ನೀಡಿದ ಭಾಷಣಗಳು ವಿವಾದಕ್ಕೆ ಕಾರಣವಾಗಿದ್ದು, ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಈ ಘಟನೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ತನಿಖೆ ನಡೆಯಲಿದೆ ಎಂದು ತಿಳಿದು ಬಂದಿದೆ.








