ಕೊರೊನಾ ಎಫೆಕ್ಟ್ ನಾಳೆ ದೇಶ ಸ್ತಬ್ದ
ಸಿಲಿಕಾನ್ ಸಿಟಿಯಲ್ಲಿ ಹೈ ಅಲರ್ಟ್
ಮನೆಯಿಂದ ಹೊರ ಬಂದ್ರೆ ಕೇಸ್ ಫಿಕ್ಸ್
ದೇಶದಾದ್ಯಂತ ನಡೆಯುತ್ತಿರುವ ಜನತಾ ಕರ್ಫ್ಯೂ ಗೆ ಸಹಕರಿಸಬೇಕು. ಮಾರ್ಚ್ 22 ರಂದು ಮನೆಯಿಂದ ಹೊರ ಬರಬಾರದು. ಒಂದು ವೇಳೆ ಮನೆಯಿಂದ ಹೊರ ಬಂದ್ರೆ ನಿಯಮ 31(ಎಲ್) ಅಡಿಯಲ್ಲಿ ಶಿಸ್ತು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.
ಮಾರ್ಚ 19 ರಂದು ರಾತ್ರಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೊರೊನಾ ವಿರುದ್ಧ ಹೋರಾಡಲು ಕರೆ ನೀಡಿದ್ದಾರೆ. ಜನತಾ ಕರ್ಫ್ಯೂ ಜಾರಿ ಮಾಡಿ, ಸಹಕರಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಕೊರೊನಾ ಮಹಾಮಾರಿ ಹರಡದಂತೆ ತಡೆಯಬೇಕಾದರೆ ಸಾಮಾಜಿಕ ಅಂತರ ಅನಿವಾರ್ಯ ಎಂದು ಹೇಳಿದ್ದಾರೆ. ಜೊತೆಗೆ ಮಾರ್ಚ್ 22 ರಂದು ಜನರು ತಮ್ಮಷ್ಟಕ್ಕೆ ತಾವೇ ಕರ್ಫ್ಯೂ ವಿಧಿಸಿಕೊಳ್ಳಬೇಕು. ಆ ಮೂಲಕ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ದೇಶದಾದ್ಯಂತ ಜನತಾ ಕರ್ಫ್ಯೂ ಆಚರಿಸಲಾಗುತ್ತಿದೆ. ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ, ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಜನಸಾಮಾನ್ಯರು ಜನತಾ ಕರ್ಫ್ಯೂವನ್ನು ಗಂಭೀರವಾಗಿ ಪರಿಗಣಿಸಬೇಕು.ಯಾರು ಸಹ ಮನೆಯಿಂದ ಹೊರ ಬರುವಂತಿಲ್ಲ. ಒಂದು ವೇಳೆ ಮನೆಯಿಂದ ಹೊರ ಬಂದರೆ ನಿಯಮ 31(ಎಲ್) ಅಡಿಯಲ್ಲಿ ಶಿಸ್ತು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ. ನಗರದಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ನಮ್ಮ ಸಿಬ್ಬಂದಿಗಳಿಗೂ ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡಬೇಕು ಎಂದು ಎಲ್ಲಾ ವಲಯದ ಡಿಸಿಪಿಗಳಿ ಸೂಚನೆ ನೀಡಲಾಗಿದೆ. ಹಾಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಭಾಸ್ಕರ್ ರಾವ್ ಹೇಳಿದ್ದಾರೆ.









