ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಜನ ಪರಿತಪಿಸುವಂತಾಗಿದೆ. ಈ ಮಧ್ಯೆ ಜನರಿಗೆ ಫುಡ್ ಪಾಯಿಸನ್ ಪ್ರಕರಣಗಳು ಹೆಚ್ಚಾಗಿವೆ ಎನ್ನಲಾಗಿದೆ.
ನಗರದಲ್ಲಿ ದಿನಕ್ಕೆ ಐದಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಮಕ್ಕಳು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಸುಮಾರು 100ಕ್ಕೂ ಅಧಿಕ ಜನರಿಗೆ ಫುಡ್ ಪಾಯಿಸನ್ ನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಕಲುಷಿತ ನೀರಿನಿಂದಾಗಿ ಆಹಾರ ವಿಷವಾಗುತ್ತಿದೆ. ತಾಪಮಾನ ಪ್ರಮಾಣ ಹೆಚ್ಚುತ್ತಿರುವಾಗ ಹೆಚ್ಚು ನೀರನ್ನು ಸೇವಿಸುವುದು ಅತ್ಯಗತ್ಯ. ಅದರ ಶುದ್ಧತೆಯನ್ನು ಖಚಿತಪಡಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ತಜ್ಞರು ಹೇಳಿದ್ದಾರೆ.
ಆಹಾರದಲ್ಲಿರುವ ಕಲ್ಮಶಗಳು, ಆಹಾರದಲ್ಲಿನ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳು, ಅವಧಿ ಮೀರಿದ ಅಥವಾ ಬೇಯಿಸದ ಆಹಾರದ ಬಳಕೆ, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ದೀರ್ಘಾವಧಿಯ ಆಹಾರ ಸಂಗ್ರಹಣೆ, ಹಾಳಾದ ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನುವುದು ಮತ್ತು ಹೆಚ್ಚು ಸಂಸ್ಕರಿಸಿದ ಆಹಾರಗಳ ಸೇವನೆ ವಿಷಾಹಾರವಾಗುತ್ತಿದೆ ಎನ್ನಲಾಗಿದೆ.
ಜ್ವರ, ವಾಂತಿ, ಅತಿಸಾರ, ತಲೆನೋವು ಮತ್ತು ಹೊಟ್ಟೆ ನೋವು, ಕೆಲವೊಮ್ಮೆ ಚರ್ಮದ ದದ್ದುಗಳು ಮತ್ತು ತುರಿಕೆಗಳು ಫುಡ್ ಪಾಯಿಸನ್ನ ಲಕ್ಷಣಗಳು ಕೂಡ ಹೆಚ್ಚಾಗುತ್ತಿವೆ.