“ಕೈ” ನಾಯಕರ ಜೊತೆ ಬೆಡ್ ಬ್ಲಾಕ್ ದಂಧೆ ಆರೋಪಿ..!

1 min read

“ಕೈ” ನಾಯಕರ ಜೊತೆ ಬೆಡ್ ಬ್ಲಾಕ್ ದಂಧೆ ಆರೋಪಿ..!

ಬೆಂಗಳೂರು : ಬೆಡ್ ಬ್ಲಾಕ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿರುವ ಆರೋಪಿಗಳ ಪೈಕಿ ಒಬ್ಬಳು ಕಾಂಗ್ರೆಸ್ ನಾಯಕರ ಜೊತೆ ಇರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಬೆಡ್ ಬ್ಲಾಕ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನೇತ್ರಾವತಿ (42) ಮತ್ತು ರೋಹಿತ್ (32) ಅವರನ್ನು ಬಂಧಿಸಿದ್ದಾರೆ.

sowmya-reddy

ಈ ಪೈಕಿ ನೇತ್ರಾವತಿ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಕಂಡ್ರೆ ಜೊತೆಗೆ ಇರುವ ಫೋಟೋಗಳು ಹರಿದಾಡುತ್ತಿದೆ.

ಬಂಧಿತ ನೇತ್ರಾವತಿ ಮತ್ತು ರೋಹಿತ್ ನೆರೆಮನೆ ನಿವಾಸಿಯಾಗಿದ್ದಾರೆ. ನಾನು ಸಾಮಾಜಿಕ ಕಾರ್ಯಕರ್ತೆ ಎಂದು ಪೊಲೀಸರ ಬಳಿ ನೇತ್ರಾವತಿ ಹೇಳಿದ್ದಾಳೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd