ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿರುವುದನ್ನು ಖಂಡಿಸಿ, ಮಂಡ್ಯದಲ್ಲಿ (Mandya) ಸಾಲು ಸಾಲು ಪ್ರತಿಭಟನೆ (Protest) ಹಮ್ಮಿಕೊಳ್ಳಲಾಗಿದೆ.
ಮಂಡ್ಯ ಜಿಲ್ಲಾ ಹಿತರಕ್ಷಣಾ ಸಮಿತಿಯಿಂದ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ. ಮಂಡ್ಯದ ಸಂಜಯ್ ಸರ್ಕಲ್‌ನಲ್ಲಿ ಅಖಂಡ ಕರ್ನಾಟಕ ರಕ್ಷಣಾ ಸೇವಾದಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಲಿದೆ. ಭೂಮಿ ತಾಯಿ ಹೋರಾಟ ಸಮಿತಿ ಕಾರ್ಯಕರ್ತರಿಂದ ಶ್ರೀರಂಗಪಟ್ಟಣದಲ್ಲಿ ಬಾರುಕೋಲು ಚಳವಳಿ ನಡೆಯಲಿದೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಇಂದು ಮಹತ್ವದ ಸಭೆ ನಡೆಯಲಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಲಿದ್ದಾರೆ. ಅ.5ರಂದು ಬೆಂಗಳೂರಿನಿಂದ ವಾಹನಗಳಲ್ಲಿ ಕೆಆರ್‌ಎಸ್‌ಗೆ ತೆರಳಿ ಪ್ರತಿಭಟನೆ ನಡೆಸಲಿದ್ದಾರೆ.