CBI
ʼರಾಜ್ಯ ಸರ್ಕಾರದ ಸಮ್ಮತಿ ಇಲ್ಲದೆ ಸಿಬಿಐ ತನಿಖೆ ನಡೆಸುವಂತಿಲ್ಲʼ: ʼಸುಪ್ರೀಂʼ ಆದೇಶ:
ನವದೆಹಲಿ: ಸಿಬಿಐ ತನಿಖೆ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶವೊಂದನ್ನ ಹೊರಡಿಸಿದೆ. ಈ ಆದೇಶದ ಅನ್ವಯ ಇನ್ಮುಂದೆ ರಾಜ್ಯ ಸರ್ಕಾರದ ಸಮ್ಮತಿ ಇಲ್ಲದೆ ಸಿಬಿಐ ಯಾವುದೇ ರಾಜ್ಯದಲ್ಲೂ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ಯಾವುದೇ ರಾಜ್ಯದಲ್ಲಾಗಲಿ ಸಿಬಿಐ ತನಿಖೆಗೆ ಮುನ್ನ ಆಯಾ ರಾಜ್ಯದ ಒಪ್ಪಿಗೆ ಪಡೆದಿರಬೇಕು. ರಾಜ್ಯ ಸರ್ಕಾರ ಒಪ್ಪಿಗೆ ನೀಡದಿದ್ರೆ, ಸಿಬಿಐ ಯಾವುದೇ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಇದೀಗ ಸುಪ್ರೀಂ ಕೋರ್ಟ್ ಸ್ಪಷ್ಟ ಆದೇಶ ನೀಡಿದೆ. ಅಷ್ಟೇ ಅಲ್ಲದೇ ಈ ವಿಚಾರದಲ್ಲಿ ಕೇಂದ್ರ ಸರ್ಕಾರವೂ ಸಹ ನಿರ್ಧಾರ ತೆಗದುಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇನ್ನೂ ಉತ್ತರ ಪ್ರದೇಶದಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿದ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಮಹತ್ವದ ಆದೇಶ ನೀಡಿದೆ. ಕಾನೂನಿನ ಪ್ರಕಾರ ರಾಜ್ಯದ ಒಪ್ಪಿಗೆ ಇಲ್ಲದೆ ಕೇಂದ್ರ ಸರ್ಕಾರ ಸಿಬಿಐ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ.
CBI
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿ: ‘ಉಕ್ಕಿನ ಮಹಿಳೆ’ ನೆನೆದ ಗಣ್ಯರು
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








