CBSE 12ನೇ ತರಗತಿ ಪರೀಕ್ಷೆ ದಿನಾಂಕ ಶೀಘ್ರದಲ್ಲೇ ಪ್ರಕಟ – 2.30 ಗಂಟೆ ಅಲ್ಲ 30 ನಿಮಿಷ ಅವಧಿ ನಿಗಧಿ..!
ನವದೆಹಲಿ: CBSE 12ನೇ ತರಗತಿ ಪರೀಕ್ಷೆ ದಿನಾಂಕ ಶೀಘ್ರವೇ ಪ್ರಕಟವಾಗಲಿದ್ದು, 2.30 ಗಂಟೆ ಬದಲಾಗಿ 30 ನಿಮಿಷ ಸಮಯ ನಿಗದಿ ಮಾಡುವ ಸಾಧ್ಯತೆಗಳಿದೆ ಎನ್ನಲಾಗಿದೆ. ಜೂನ್ 1ರಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲಾ ಪರೀಕ್ಷೆಯ ದಿನಾಂಕ ಮತ್ತು ಸಮಯದ ಬಗ್ಗೆ ಘೋಷಣೆ ಮಾಡುವ ಸಾಧ್ಯತೆಗಳಿವೆ. ಶಿಕ್ಷಣ ತಜ್ಞರ ಸಲಹೆ ಮೇರೆಗೆ ಪರೀಕ್ಷಾ ಅವಧಿಯನ್ನು 30 ನಿಮಿಷಕ್ಕೆ ಇಳಿಸಲು ಮುಂದಾಗಿದ್ದು, ಎಲ್ಲವೂ ವಸ್ತುನಿಷ್ಠ ಪ್ರಶ್ನೆಗಳಿರಲಿವೆ ಎಂದು ಹೇಳಲಾಗುತ್ತಿದೆ.
ದೆಹಲಿ, ಮಹಾರಾಷ್ಟ್ರ, ಗೋವಾ, ಅಂಡಮಾನ್ ಮತ್ತು ನಿಕೋಬಾರ್ ಮಾತ್ರ ಪರೀಕ್ಷೆ ಇಲ್ಲದೇ ಮಕ್ಕಳನ್ನು ಪಾಸ್ ಮಾಡುವ ಪ್ರಸ್ತಾವವನ್ನ ಸರ್ಕಾರದ ಮುಂದಿಟ್ಟಿದ್ದವು. ಈ ರಾಜ್ಯಗಳು ಪರೀಕ್ಷೆಗೂ ಮೊದಲು ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡುವಂತೆ ಮನವಿಯನ್ನ ಮಾಡಿಕೊಂಡಿದ್ದವು. 32ರಲ್ಲಿ 29 ರಾಜ್ಯಗಳು ಕಡಿಮೆ ಅವಧಿ ಪರೀಕ್ಷೆಗೆ ಸಮ್ಮತಿ ನೀಡಿದ್ರೆ, ರಾಜಸ್ಥಾನ, ತ್ರಿಪುರ ಮತ್ತು ತೆಲಂಗಾಣ ಮಾತ್ರ ಮೊದಲಿನ ಪದ್ಧತಿಯಂತೆ ಪರೀಕ್ಷೆ ನಡೆಸುವಂತೆ ಕೇಳಿದ್ದವು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.