ನವದೆಹಲಿ: ಸಿಬಿಎಸ್‍ಇ ಪಠ್ಯಕ್ರಮದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ.88.78ರಷ್ಟು ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಕ್ರಿಯಾಲ್ ಟ್ವಿಟರ್‍ನಲ್ಲಿ ಫಲಿತಾಂಶ ಪ್ರಕಟಗೊಂಡಿರುವುದನ್ನು ಘೋಷಣೆ ಮಾಡಿದ್ದಾರೆ.
ರಾಷ್ಟ್ರಾದ್ಯಂತ ಶೇ. 88.78 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ. 5.38ರಷ್ಟು ಹೆಚ್ಚು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಳೆದ ವರ್ಷ ಶೇ. 83.40 ಫಲಿತಾಂಶ ಬಂದಿತ್ತು.
ಕೇರಳದ ತಿರುವನಂತಪುರಂ ನಗರ ತನ್ನ ನಂಬರ್ ಒನ್ ಸ್ಥಾನ ಉಳಿಸಿಕೊಂಡಿದೆ. ಇಲ್ಲಿ ಶೇ. 97.67 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
ಪ್ರಾದೇಶಿಕವಾರು ಫಲಿತಾಂಶದಲ್ಲಿ ಬೆಂಗಳೂರು ಈ ಬಾರಿ ಗಮನಾರ್ಹ ಸಾಧನೆ ಮಾಡಿದೆ. ಬೆಂಗಳೂರಿನ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಶೇ. 97.05 ಪಾಸಾಗಿದ್ದಾರೆ.
ಈ ವರ್ಷದ ಫೆಬ್ರವರಿಯಲ್ಲಿ ನಡೆದ ಸಿಬಿಎಸ್‍ಇ ದ್ವಿತೀಯ ಪಿಯು ಪರೀಕ್ಷೆಗಳಲ್ಲಿ ದೇಶಾದ್ಯಂತ 13,109 ಶಾಲೆಗಳ 11,92,961 ಮಕ್ಕಳು ಪರೀಕ್ಷೆ ಬರೆದಿದ್ದರು. ಅವ10,59,080 ಮಕ್ಕಳು ಉತ್ತೀರ್ಣರಾಗಿದ್ದಾರೆ. 1.34 ಲಕ್ಷ ವಿದ್ಯಾರ್ಥಿಗಳು ಅನುತೀರ್ಣರಾಗಿದ್ದಾರೆ.
ಕಳೆದ ಮಾರ್ಚ್ ತಿಂಗಳಲ್ಲಿ ಸಿಬಿಎಸ್‍ಇ ಪರೀಕ್ಷೆಗಳು ಅರಂಭವಾಗಿದ್ದವು. ಆದರೆ, ದೇಶಾದ್ಯಂತ ಲಾಕ್‍ಡೌನ್ ಘೋಷಣೆಯಾದ ನಂತರ ಕೆಲ ಪತ್ರಿಕೆಗಳಿಗೆ ಪರೀಕ್ಷೆ ನಡೆದಿರಲಿಲ್ಲ. ಹೀಗಾಗಿ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನ ಆಧರಿಸಿ ಉಳಿದ ವಿಷಯಗಳಿಗೆ ಫಲಿತಾಂಶ ಪ್ರಕಟಿಸಲಾಗಿದೆ.
ಈ ವೆಬ್‍ಸೈಟ್‍ಗಳ್ಲಿ ಫಲಿತಾಂಶ ಲಭ್ಯ