ಸಿಬಿಎಸ್‍ಇ 10ನೇ ತರಗತಿ ಫಲಿತಾಂಶ ಪ್ರಕಟ CBSE saaksha tv
ನವದೆಹಲಿ : ಸಿಬಿಎಸ್‍ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷೆ ನಡೆಸಿರಲಿಲ್ಲ.
ಈ ಕಾರಣದಿಂದಾಗಿ ಈ ಹಿಂದೆ ನಡೆಸಿದ್ದ ಪರೀಕ್ಷೆಗಳಲ್ಲಿ ಪಡೆದಿದ್ದ ಅಂಕಗಳ ಆಧಾರದ ಮೇಲೆ ಗ್ರೇಡ್ ನೀಡಲಾಗಿದೆ ಎಂದು ಮಂಡಳಿ ಸ್ಪಷ್ಟಪಡಿಸಿದೆ.
ವಿದ್ಯಾರ್ಥಿಗಳು ಫಲಿತಾಂಶವನ್ನು cbseresults.nic.in ವೆಬ್ ಸೈಟ್ ಗೆ ಭೇಟಿ ಪಡೆಯಬಹುದು.
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ಆನ್ ಲೈನ್ ನಲ್ಲಿ ಪರೀಕ್ಷೆ ಫಲಿತಾಂಶವನ್ನು ಬಿಡುಗಡೆ ಮಾಡುವ ಜೊತೆಗೆ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಡಿಜಿಲಾಕರ್‍ನಲ್ಲೂ ಪ್ರಕಟಿಸಿದೆ.
ಇಲ್ಲಿ ಫಲಿತಾಂಶವನ್ನು ವೀಕ್ಷಿಸಲು ವಿದ್ಯಾರ್ಥಿಗಳು ಆಧಾರ್ ಕಾರ್ಡ್ ನಂಬರ್ ಮತ್ತು ಫೋನ್ ನಂಬರ್ ನಮೂದಿಸಿ ತಮ್ಮ ಫಲಿತಾಂಶ ನೋಡಬಹುದಾಗಿದೆ.
ವಿದ್ಯಾರ್ಥಿಗಳು ಲಿಂಕ್ 1 — https://bit.ly/3ikdkPl, ಲಿಂಕ್ 2 — https://bit.ly/3lDJ1Fp, ಮತ್ತು ಲಿಂಕ್ 3 — https://bit.ly/2TOxZBo ಮೂಲಕ ಫಲಿತಾಂಶ ವೀಕ್ಷಿಸಬಹುದು.