CBSE exams have been cancled
CBSE 12ನೇ ತರಗತಿ ಪರೀಕ್ಷೆ ರದ್ದು
ನವದೆಹಲಿ: CBSE 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನವನ್ನ ಕೈಗೊಳ್ಳಲಾಗಿದೆ. ಕೊರೊನಾದ ಕಠಿಣ ಪರಿಸ್ಥಿತಿ ಸಮಯದಲ್ಲಿ ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳು ಹಿತದೃಷ್ಟಿಯಿಂದ ಸುರಕ್ಷಿತವಲ್ಲ ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಭೆಯಲ್ಲಿ ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ರಾಜ್‍ನಾಥ್ ಸಿಂಗ್ ಸೇರಿದಂತೆ ಹಲವು ಪ್ರಮುಖರು , ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಸಹ ಕೊರೊನಾ ನಂತರದ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಈ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿಲ್ಲ.
CBSE 12ನೇ ತರಗತಿ ಪರೀಕ್ಷೆ ನಡೆಸುವ ಬಗ್ಗೆ ಕೇಂದ್ರ ಸರ್ಕಾರ ಜೂನ್ 3ರೊಳಗೆ ಸುಪ್ರೀಂ ಕೋರ್ಟ್‍ಗೆ ಪ್ರತಿಕ್ರಿಯೆ ನೀಡಲಿದೆ. ಹೀಗಾಗಿ ಖುದ್ದು ಪ್ರಧಾನಿ ನರೇಂದ್ರ ಮೋದಿ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪರೀಕ್ಷೆ ನಡೆಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು.
ಪರೀಕ್ಷೆ ರದ್ದುಗೊಳಿಸುವ ಕುರಿತು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಜೂನ್ 3ರಂದು ವಿಚಾರಣೆ ನಡೆಸಲಿದೆ. ಈ ವೇಳೆ ಪರೀಕ್ಷೆ ರದ್ದು ಕುರಿತು ಕೇಂದ್ರ ಸರ್ಕಾರ ತನ್ನ ನಿರ್ಧಾರ ತಿಳಿಸಬೇಕಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಸಭೆ ನಡೆಸಿದ್ದಾರೆ.
ಪರೀಕ್ಷೆ ನಡೆಸುವ ಕುರಿತು ಕೇಂದ್ರ ಸಚಿವ ರಾಜ್‍ನಾಥ್ ಸಿಂಗ್ ಸಭೆಯಲ್ಲಿ ಮಾಹಿತಿ ನೀಡಿದ್ದು, ಹಲವು ರಾಜ್ಯಗಳು ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆ ನಡೆಸುವ ಕುರಿತು ಇಂಗಿತ ವ್ಯಕ್ತಪಡಿಸಿವೆ. ಇನ್ನೂ ಹಲವು ರಾಜ್ಯಗಳು ರದ್ದುಗೊಳಿಸಲು ಮನವಿ ಮಾಡಿವೆ. ಕೆಲ ರಾಜ್ಯಗಳು ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ ಬಳಿಕ ಪರೀಕ್ಷೆ ನಡೆಸುವಂತೆ ಹೇಳಿವೆ ಎಂದು ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.
CBSE exams have been cancled