ದೇಶದಲ್ಲಿ ಕೊರೊನಾ ವೈರಸ್ ಹರಡುವಿಕೆ ಹೆಚ್ಚಾಗುತ್ತಿದೆ. ಇದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಒಂದೆಡೆ ಜನ ಸಾಮಾನ್ಯರು ಮನೆಯಿಂದ ಹೊರ ಬರುತ್ತಿಲ್ಲ. ಮತ್ತೊಂದೆಡೆ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಎದುರಾಗಿದ್ದವು. ಇದೀಗ ಸಿಬಿಎಸ್ಇ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೂ ಮತ್ತು ಪೋಷಕರಿಗೂ ಸ್ವಲ್ಪ ಮಟ್ಟಿಗೆ ನಿರಾಳ ಸಿಕ್ಕಿದೆ. ಮುಂಜಾಗ್ರಕೊರೊನಾ ಭೀತಿಯಿಂದ ಸಿಬಿಎಸ್ಇ ಪರೀಕ್ಷೆಗಳು ಮುಂದೂಡಿಕೆ
ದೇಶದಲ್ಲಿ ಕೊರೊನಾ ವೈರಸ್ ಹರಡುವಿಕೆ ಹೆಚ್ಚಾಗುತ್ತಿದೆ. ಇದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಒಂದೆಡೆ ಜನ ಸಾಮಾನ್ಯರು ಮನೆಯಿಂದ ಹೊರ ಬರುತ್ತಿಲ್ಲ. ಮತ್ತೊಂದೆಡೆ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಎದುರಾಗಿದ್ದವು. ಇದೀಗ ಸಿಬಿಎಸ್ಇ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೂ ಮತ್ತು ಪೋಷಕರಿಗೂ ಸ್ವಲ್ಪ ಮಟ್ಟಿಗೆ ನಿರಾಳ ಸಿಕ್ಕಿದೆ. ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 19ರಿಂದ ಮಾ.31ರವರೆಗೆ 10ನೇ ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಡಳಿ ಆದೇಶವನ್ನು ಹೊರಡಿಸಿದೆ. ಮಾ.31ರ ನಂತರ ಪರೀಕ್ಷೆಗಳನ್ನು ನಡೆಸುವುದಾಗಿ ತಿಳಿಸಿದೆ. ಸದ್ಯದಲ್ಲೇ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಮಾಹಿತಿ ನೀಡಲಾಗಿದೆ.
ತಾ ಕ್ರಮವಾಗಿ ಮಾರ್ಚ್ 19ರಿಂದ ಮಾ.31ರವರೆಗೆ 10ನೇ ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಡಳಿ ಆದೇಶವನ್ನು ಹೊರಡಿಸಿದೆ. ಮಾ.31ರ ನಂತರ ಪರೀಕ್ಷೆಗಳನ್ನು ನಡೆಸುವುದಾಗಿ ತಿಳಿಸಿದೆ. ಸದ್ಯದಲ್ಲೇ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಮಾಹಿತಿ ನೀಡಲಾಗಿದೆ.









