CBSE 10, 12ನೇ ತರಗತಿ ಖಾಸಗಿ ಅಭ್ಯರ್ಥಿಗಳಿಗೆ ಆ.16ರಿಂದ ಪರೀಕ್ಷೆ..!
ನವದೆಹಲಿ : ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು (CBSE) 10 ಮತ್ತು 12ನೇ ತರಗತಿಯ ಖಾಸಗಿ ಅಭ್ಯರ್ಥಿಗಳಿಗೆ ಆಗಸ್ಟ್ 16ರಿಂದ ಸೆಪ್ಟೆಂಬರ್ 15ರೊಳಗೆ ಪರೀಕ್ಷೆಗಳನ್ನು ನಡೆಸುವುದಾಗಿ ಬುಧವಾರ ಪ್ರಕಟಿಸಿದೆ.
ಈ ಪರೀಕ್ಷಾರ್ಥಿಗಳ ಹಿಂದಿನ ಮೌಲ್ಯಮಾಪನ ದಾಖಲೆಗಳು ಮಂಡಳಿ ಬಳಿ ಇಲ್ಲದ ಕಾರಣ, ಅವರಿಗೆ ಪರ್ಯಾಯ ಮೌಲ್ಯಮಾಪನ ನೀತಿಯ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲು ಆಗದು ಎಂದು ಮಂಡಳಿ ಸ್ಪಷ್ಟಪಡಿಸಿದೆ.
ಈ ಅಭ್ಯರ್ಥಿಗಳ ಪರೀಕ್ಷೆ ಮುಗಿದ ಕೆಲವೇ ದಿನಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಈ ಮೂಲಕ ಅವರಿಗೆ ಉನ್ನತ ಶಿಕ್ಷಣ ಪ್ರವೇಶಕ್ಕೆ ತೊಂದರೆ ಆಗದಂತೆ ಎಚ್ಚರವಹಿಸಲಾಗು ವುದು ಎಂದು ಮಂಡಳಿಯ ಪರೀಕ್ಷಾ ಮೇಲ್ವಿಚಾರಕರು ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.