ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾದ ಬೆನ್ನುಬಿದ್ದಿರುವ ಸಿಸಿಬಿ ಪೊಲೀಸರು ತುಪ್ಪದ ಬೆಡಗಿ ರಾಗಿಣಿ ದ್ವಿವೇದಿಗೆ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ.
ನಿನ್ನೆಯೇ ವಿಚಾರಣೆಗೆ ಬರುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು. ಆದರೆ, ಕೊರೊನಾ ಪ್ಲಾಸ್ಮಾ ದಾನದ ಕಾರ್ಯಕ್ರಮದ ನೆಪ ಹೇಳಿದ್ದ ರಾಗಿಣಿ ಬಗ್ಗೆ ಸಿಸಿಬಿ ಪೊಲೀಸರಿಗೆ ಅನುಮಾನ ಬಂದಿತ್ತು.
ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಿಗ್ಗೆಯೇ ಸಿಸಿಬಿ ಪೊಲೀಸರು ಯಲಹಂಕದ ನ್ಯಾಯಾಂಗ ಬಡಾವಣೆಯಲ್ಲಿರುವ ಅನನ್ಯ ಅಪಾರ್ಟ್‍ಮೆಂಟ್‍ನ ರಾಗಿಣಿಗೆ ಸೇರಿದ 2 ಫ್ಲ್ಯಾಟ್‍ಗಳ ಮೇಲೆ ದಾಳಿ ಮಾಡಿದ್ದಾರೆ. ಸರ್ಜ್ ವಾರೆಂಟ್‍ನೊಂದಿಗೆ ತೆರಳಿರುವ ಸಿಸಿಬಿ ಪೊಲೀಸರು ಕಳೆದ 2 ಗಂಟೆಗಳಿಂದ ತೀವ್ರ ಶೋಧ ನಡೆಸಿದ್ದಾರೆ.
ರಾಗಿಣಿ ಅವರ ಮನೆಯ ಮೂಲೆ ಮೂಲೆಗಳನ್ನೂ ಶೋಧ ನಡೆಸಿದ್ದಾರೆ. ಈಗಾಗಲೇ ರಾಗಿಣಿ ಅವರ 2 ಲ್ಯಾಪ್‍ಟಾಪ್, 4 ಮೊಬೈಲ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ರಾಗಿಣಿ ತಮ್ಮ ಮೊಬೈಲ್‍ಗಳಲ್ಲಿರುವ ವಾಟ್ಸ್‍ಆಪ್‍ಗಳನ್ನ ಅನ್ ಇನ್‍ಸ್ಟಾಲ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಮೊಬೈಲ್‍ಗಳನ್ನು ವಶಕ್ಕೆ ಪಡೆದು ಡಾಟಾಗಳ ಪರಿಶೀಲನೆ ನಡೆಸಿದ್ದಾರೆ.
ರಾಗಿಣಿ ಅವರ ಕಾರನ್ನೂ ಕೂಡ ಪರಿಶೀಲನೆ ನಡೆಸಿದ್ದು, ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಮತ್ತೊಂದೆಡೆ ಇಂದಿರಾನಗರದ ಫ್ಲ್ಯಾಟ್‍ನಲ್ಲೂ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ರಾಗಿಣಿ ಮನೆಗೆ ಸಿಸಿಬಿ ಪೊಲೀಸರು ಬಂದ ವಿಷಯ ತಿಳಿದ ಇಬ್ಬರು ವಕೀಲರು ಬಂದಿದ್ದಾರೆ. ಆದರೆ, ವಕೀಲರು ರಾಗಿಣಿ ಅವರ ಭೇಟಿಗೆ ತೆರಳಲು ಸಿಸಿಬಿ ಪೊಲೀಸರು ತಡೆದಿದಿದ್ದಾರೆ. ಹೀಗಾಗಿ ಮನೆಯ ಹೊರಗೆ ವಕೀಲರು ಕಾಯುತ್ತಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳನ್ನು ನೋಡಿದರೆ ಸಿಸಿಬಿ ಪೊಲೀಸರು ಯಾವುದೇ ಕ್ಷಣದಲ್ಲಿ ರಾಗಿಣಿ ದ್ವಿವೇದಿ ಅವರನ್ನು ವಶಕ್ಕೆ ಪಡೆದು ಸಿಸಿಬಿ ಕಚೇರಿಗೆ ಹೆಚ್ಚಿನ ವಿಚಾರಣೆಗೆ ಕರೆದೊಯ್ಯುವ ಸಾಧ್ಯತೆ ಇದೆ ಎನ್ನಲಾಗಿದೆ.
ನಟಿ ರಾಗಿಣಿ ಆಪ್ತ ರವಿಶಂಕರ್‍ನನ್ನು ಬಂಧಿಸಿ ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರಿಗೆ ವಿಚಾರಣೆ ವೇಳೆ ಡ್ರಗ್ಸ್ ನಂಟಿನ ಬಗ್ಗೆ ಮಹತ್ವದ ಸುಳಿವು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ರಾಗಿಣಿ ಮನೆ ಮೇಲೆ ದಿಢೀರ್ ದಾಳಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
****************************************
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.









