ಬೆಂಗಳೂರು: ಡ್ರಗ್ಸ್ ದಂಧೆ ಆರೋಪದಡಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ವಿಚಾರಣೆ ಇಂದು ತೀವ್ರಗೊಳ್ಳುವ ಸಾಧ್ಯತೆ ಇದೆ.
ಶುಕ್ರವಾರ ರಾಗಿಣಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಇಡೀ ದಿನ ವಿಚಾರಣೆ ನಡೆಸಿದ್ದರು. ಈ ವೇಳೆ ಆಕೆ ನೀಡಿದ ಮಾಹಿತಿ ಆಧರಿಸಿ ಬಂಧಿಸಿ ಎಫ್ಐಆರ್ ದಾಖಲಿಸಿದ್ದರು.
ಆದರೆ, ಶುಕ್ರವಾರ ರಾತ್ರಿಯಿಂದ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದ ನಟಿ ರಾಗಿಣಿ ಬೆನ್ನುನೋವು ನೋವು ಹಾಗೂ ವೈಯಕ್ತಿಕ ಸಮಸ್ಯೆ ಜಾಸ್ತಿಯಾಗಿರುವುದಾಗಿ ಹೇಳಿಕೊಂಡಿದ್ದಳು. ಹೀಗಾಗಿ ನಿನ್ನೆ ಇಡೀ ದಿನ ರಾಗಿಣಿಯ ವಿಚಾರಣೆ ನಡೆಸದೇ ವಿಶ್ರಾಂತಿ ನೀಡಲಾಗಿತ್ತು.
ಇಂದು ಬೆಳಿಗ್ಗೆ 10 ಗಂಟೆಯಿಂದ ಮತ್ತೆ ರಾಗಿಣಿಯನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಲು ನಿರ್ಧರಿಸಿದ್ದಾರೆ. ವಿಚಾರಣೆಗೂ ಮುನ್ನ ಆರೋಗ್ಯ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಕಳೆದ ರಾತ್ರಿ ಸಿಸಿಬಿ ಇನ್ಸ್ಪೆಕ್ಟರ್ ಅಂಜುಮಾಲಾ ರಾಗಿಣಿ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದಾರೆ.
ಇಂದು ಡ್ರಗ್ಸ್ ಸೇವನೆ ಹಾಗೂ ಮಾರಾಟ ಕುರಿತಂತೆ ರಾಗಿಣಿಯನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಡ್ರಗ್ಸ್ ಪೆಡ್ಲರ್ ಹಾಗೂ ಮೂರನೇ ಆರೋಪಿ ವಿರೇನ್ ಖನ್ನಾ ಕೂಡ ಸಿಸಿಬಿ ಪೊಲೀಸರ ವಶದಲ್ಲಿರುವ ಹಿನ್ನೆಲೆಯಲ್ಲಿ ಆತ ನೀಡುವ ಮಾಹಿತಿ ಆಧರಿಸಿ ಡ್ರಗ್ಸ್ ದಂಧೆ ಬಗ್ಗೆ ರಾಗಿಣಿಯ ವಿಚಾರಣೆ ನಡೆಯಲಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ರಾಗಿಣಿಗೆ ಆಗುತ್ತ ಇಡಿ ಉರುಳು…!
ಸ್ಯಾಂಡಲ್ವುಡ್ನಲ್ಲಿ ರಾಣಿಯಂತೆ ಮೆರೆದ ರಾಗಿಣಿ ದ್ವಿವೇದಿಗೆ ಇಡಿ ಉರುಳು ಸುತ್ತಿಕೊಳ್ಳುವ ಸಾಧ್ಯತೆ ಇದೆ. ರಾಗಿಣಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ದಾಖಲೆಗಳು ಸಿಸಿಬಿ ದಾಳಿ ವೇಳೆ ಪತ್ತೆಯಾಗಿವೆ. ಶುಕ್ರವಾರ ರಾಗಿಣಿ ಮನೆ ಮೇಲೆ ನಡೆದ ದಾಳಿ ವೇಳೆ ಆದಾಯಕ್ಕಿಂತ ಹೆಚ್ಚು ಆಸ್ತಿ ಇರುವ ಕುರಿತ ದಾಖಲೆಗಳು ಪತ್ತೆಯಾಗಿದ್ದವು. ಹೀಗಾಗಿ ಈ ದಾಖಲೆಗಳನ್ನು ಸಿಸಿಬಿ ಅಧಿಕಾರಿಗಳು ಇಡಿಗೆ ವರ್ಗಾಯಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
**************************
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.