ಬೆಂಗಳೂರು: ಇತ್ತೀಚೆಗಷ್ಟೇ ಪಿಎಸ್ ಐ ಪರಶುರಾಮ್ ಹೃದಯಾಘಾತಕ್ಕೆ ಬಲಿಯಾಗಿದ್ದರು. ಈ ಸಾವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಹೀಗಾಗಿ ಸಿಐಡಿ ತನಿಖೆಗೆ ಸರ್ಕಾರ ವಹಿಸಿತ್ತು. ಈ ಘಟನೆ ಮಾಸುವ ಮುನ್ನವೇ ಸಿಸಿಬಿ ಇನ್ಸ್ ಪೆಕ್ಟರ್ (Police Inspector) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಿಸಿಬಿ (CCB) ಆರ್ಥಿಕ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮ್ಮೇಗೌಡ (Thimme Gowda) ಅವರು ಬಿಡದಿ ಬಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ತಿಮ್ಮೇಗೌಡ ಶವ ಪತ್ತೆಯಾಗಿದೆ. ಈ ಘಟನೆ ಬಿಡದಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆದರೆ, ಆತ್ಮಹತ್ಯೆಗೆ ಯಾವ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.