ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಸಂಪರ್ಕ ಆರೋಪದ ಮೇರೆಗೆ ಸಿಸಿಬಿ ಪೊಲೀಸರು ನೀಡಿದ ನೋಟಿಸ್ ಹಿನ್ನೆಲೆಯಲ್ಲಿ ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಆರ್ಯನ್ ಹಾಗೂ ಮಾಜಿ ಕಾರ್ಪೋರೇಟರ್ ಆರ್.ವಿ ಯುವರಾಜ್ ವಿಚಾರಣೆಗೆ ಹಾಜರಾಗಿದ್ದಾರೆ.
ಮೂವರನ್ನೂ ಸಿಸಿಬಿ ಅಧಿಕಾರಿಗಳು ಪ್ರತ್ಯೇಕವಾಗಿ ವಿಚಾರಣೆ ಮಾಡುತ್ತಿದ್ದಾರೆ. ಅಕುಲ್ ಬಾಲಾಜಿ ಅವರನ್ನು ಸಿಸಿಬಿ ಇನ್ಸ್ಪೆಕ್ಟರ್ ಅಂಜುಮಾಲಾ ನಾಯಕ್ ವಿಚಾರಣೆ ಮಾಡುತ್ತಿದ್ದಾರೆ. ಮಾಜಿ ಕಾರ್ಪೋರೇಟರ್ ಆರ್.ವಿ ಯುವರಾಜ್ ಮೊಬೈಲ್ ವಶಕ್ಕೆ ಪಡೆದು ತನಿಖಾಧಿಕಾರಿ ಪ್ರಶಾಂತ್ ವಿಚಾರಣೆ ಮಾಡುತ್ತಿದ್ದರೆ, ನಟ ಸಂತೋಷ್ ಆರ್ಯನ್ ಅವರನ್ನು ಸಿಸಿಬಿ ಇನ್ಸ್ಪೆಕ್ಟರ್ ಪುನೀತ್ ಡ್ರಿಲ್ ಮಾಡುತ್ತಿದ್ದಾರೆ.
ಮಾಜಿ ಕಾರ್ಪೋರೇಟರ್ ಆರ್.ವಿ ಯುವರಾಜ್ಗೆ ಇಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಸೂಚಿಸಲಾಗಿತ್ತು. ಆದರೆ, ಬೆಳಿಗ್ಗೆ 9 ಗಂಟೆಗೂ ಮೊದಲೇ ಯುವರಾಜ್ ಸಿಸಿಬಿ ಕಚೇರಿಗೆ ಹಾಜರಾಗಿದ್ದಾರೆ. ಡ್ರಗ್ಸ್ ಪ್ರಕರಣದ ತನಿಖಾಧಿಕಾರಿಗಳು ಕಚೇರಿಗೆ ಬರುವ ಮೊದಲೇ ಆರ್.ವಿ ಯುವರಾಜ್ ಬಂದಿರುವುದು ಕುತೂಹಲ ಮೂಡಿಸಿದೆ.
ಮತ್ತೊಬ್ಬ ನಟ ಸಂತೋಷ್ ಆರ್ಯನ್ ಕೂಡ, ಅರ್ಧಗಂಟೆ ಮೊದಲೇ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ನನಗೆ ಸಂಜನಾ ನಿಕಟ ಸಂಪರ್ಕ ಇಲ್ಲ. 5 ವರ್ಷದ ಹಿಂದೆ ಸಂಜನಾ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದೆ. ಆಗ ರಾಹುಲ್ ಎಂಬಾತನ ಪರಿಚಯವಾಗಿ ಪೋಟೋ ತೆಗೆಸಿಕೊಂಡಿದ್ದ. ಫೋಟೋಗಳನ್ನು ಆತ ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದ. ಹಾಗಾಗಿ ಡ್ರಗ್ಸ್ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಸಂತೋಷ್ ಹೇಳಿದ್ದಾರೆ.
ಹೈದರಾಬಾದ್ನಿಂದ ಆಗಮಿಸಿದ ನಿರೂಪಕ ಅಕುಲ್ ಬಾಲಾಜಿ ಸರಿಯಾದ ಸಮಯಕ್ಕೆ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ನೋಟಿಸ್ ನೀಡಿದ ಕಾರಣ ವಿಚಾರಣೆಗೆ ಬಂದಿದ್ದೇನೆ. ನಮ್ಮ ತಾಯಿ ಹೇಳಿದಂತೆ ತಪ್ಪು ಮಾಡದಿದ್ದರೆ ಹೆದರಬೇಡ ಎನ್ನುವಂತೆ ನಾನು ಯಾವುದೇ ತಪ್ಪು ಮಾಡಿಲ್ಲ. ಸಿಸಿಬಿ ವಿಚಾರಣೆಗೆ ನಾನು ಸಹಕಾರ ನೀಡುತ್ತೇನೆ. ನನ್ನ ಬಳಿ ಇರುವ ದಾಖಲೆಗಳನ್ನೂ ನೀಡುತ್ತೇನೆ ಎಂದು ಅಕುಲ್ ಸ್ಪಷ್ಟಪಡಿಸಿದ್ದಾರೆ.
ನಟಿ ರಾಗಿಣಿ ವಿಚಾರಣೆಗೆ ಹಾಜರಾಗಲು ನೆಪ ಹೇಳಿದ ಕಾರಣ ಆಕೆ ಮನೆ ಮೇಲೆ ದಾಳಿ ಮಾಡಿ ಬಂಧಿಸಲಾಗಿತ್ತು. ವಿಚಾರಣೆಗೆ ಬರದೆ ನೆಪ ಹೇಳಿ ತಪ್ಪಿಸಿಕೊಂಡರೆ ಅರೆಸ್ಟ್ ಅಗುವ ಭಯದಿಂದಲೇ ಎಲ್ಲರೂ ಸಮಯಕ್ಕೆ ಸರಿಯಾಗಿ ವಿಚಾರಣೆಗೆ ಹಾಜರಾಗಿದ್ದು, ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನವಾ ಎಂಬ ಮಾತುಗಳು ಕೇಳಿ ಬರುತ್ತಿವೆ.
ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...








