ಬೆಂಗಳೂರು : ಡ್ರಗ್ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿ ಪ್ರಿಯಾಂಕಾ ಆಳ್ವ ಅವರಿಗೆ ಎರಡನೇ ಬಾರಿ ನೋಟಿಸ್ ಜಾರಿ ಮಾಡಿದ್ದಾರೆ.
ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವ ನಾಪತ್ತೆಯಾಗಿದ್ದಾನೆ.
ಈ ಸಂಬಂಧ ಆತನ ಸಹೋದರಿ ಪ್ರಿಯಾಂಕಾ ಆಳ್ವ ಮುಂಬೈ ನಿವಾಸಕ್ಕೆ ಸರ್ಚ್ ವಾರೆಂಟ್ ಪಡೆದು ತೆರಳಿದ್ದ ಸಿಸಿಬಿ ಅಧಿಕಾರಿಗಳು, ಮನೆಯಲ್ಲಿ ಪರಿಶೀಲನೆ ನಡೆಸಿದ್ದರು.
ಇದನ್ನೂ ಓದಿ : ಒಂದು ರೂಪಾಯಿ ನಾಣ್ಯದಿಂದ 25 ಲಕ್ಷ ರೂ ಗಳಿಸಲು ಸಾಧ್ಯ – ಹೇಗೆ ಗೊತ್ತಾ
ಅಲ್ಲದೆ ನಿನ್ನೆ ಬೆಂಗಳೂರಿನ ಸಿಸಿಬಿ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು.
ಆದರೆ ನಿನ್ನೆ ಪ್ರಿಯಾಂಕಾ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಇಂದು ಸಿಸಿಬಿ ಅಧಿಕಾರಿಗಳು ಅಕ್ಟೋಬರ್ 20ರಂದು ವಿಚಾರಣೆಗೆ ಹಾಜರಾಗುವಂತೆ ಮತ್ತೆ ನೋಟಿಸ್ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel