ಬೆಂಗಳೂರು: ಡ್ರಗ್ಸ್ ಬಳಕೆ ಹಾಗೂ ಡ್ರಗ್ಸ್ ಜಾಲದ ಜತೆ ಸಂಪರ್ಕ ಹೊಂದಿರುವ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹಾಗೂ ಎನ್ಸಿಬಿ ನೀಡಿರುವ ಮಾಹಿತಿ ಅಧರಿಸಿ ಸ್ಯಾಂಡಲ್ವುಡ್ನ ಸ್ಟಾರ್ ನಟ-ನಟಿಯರಿಗೆ ನೋಟಿಸ್ ನೀಡಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಇಂದ್ರಜಿತ್ ಲಂಕೇಶ್ 10ರಿಂದ 15 ನಟ-ನಟಿಯರ ಬಗ್ಗೆ ಮಾಹಿತಿ ನೀಡಿದ್ದಾಗಿ ತಿಳಿಸಿದ್ದಾರೆ. ಜೊತೆಗೆ ಸ್ಯಾಂಡಲ್ವುಡ್ನ ನಟ-ನಟಿಯರಿಗೆ ಡ್ರಗ್ಸ್ ಮಾರಾಟ ಮಾಡುತ್ತಿದೆ ಎಂದು ಕಿಂಗ್ಪಿನ್ ಅನಿಕಾ.ಡಿ ನೀಡಿದ ತಪ್ಪೊಪ್ಪಿಗೆ ಹೇಳಿಕೆ ಆಧರಿಸಿ ಸಿಸಿಬಿ ತನಿಖೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಸ್ಟಾರ್ ನಟ-ನಟಿಯರಿಗೆ ನೋಟಿಸ್ ನೀಡಿ ಅವರನ್ನು ವಿಚಾರಣೆ ಕರೆಸಿಕೊಳ್ಳಲು ಸಿಸಿಬಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಬಿಗ್ ಸ್ಟಾರ್ಗಳಿಗೂ ನೋಟಿಸ್ ನೀಡಲು ಸಿಸಿಬಿ ಪೊಲೀಸರು ಪ್ಲ್ಯಾನ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡ್ರಗ್ಸ್ ಲಿಂಕ್ ಮಾಹಿತಿ ಆಧರಿಸಿ ಸಿಸಿಬಿ ತನಿಖೆ-ಸಂದಿಪ್ ಪಾಟೀಲ್
ಸ್ಯಾಂಡಲ್ವುಡ್ ನಟ-ನಟಿಯರು ಹಾಗೂ ರಾಜಕಾರಣಿಗಳ ಮಕ್ಕಳ ಡ್ರಗ್ಸ್ ನಂಟಿನ ಬಗ್ಗೆ ಇಂದ್ರಜಿತ್ ಲಂಕೇಶ್ ನೀಡಿರುವ ಮಾಹಿತಿ ಆಧರಿಸಿ ತನಿಖೆ ನಡೆಯಲಿದೆ ಎಂದು ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ಕೊಟ್ಟ ಮಾಹಿತಿ ಬಹಿರಂಗ ಪಡಿಸಲು ಆಗಲ್ಲ. ಅವರು ಸಿಸಿಬಿ ಪೊಲೀಸರ ಮುಂದೆ ಸಾಕಷ್ಟು ಮಾಹಿತಿ ಕೊಟ್ಟಿದ್ದಾರೆ. ತನಿಖೆ ಮುಗಿದ ಬಳಿಕ ಮಾಹಿತಿ ನೀಡುತ್ತೇವೆ. ತನಿಖೆ ಮುಗಿಯದ ಹೊರತು ಮಾಹಿತಿ ನೀಡಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಟ-ನಟಿಯರು ಡ್ರಗ್ಸ್ ಜಾಲದ ಜತೆ ಲಿಂಕ್ ಹೊಂದಿದ್ದಾರೆ ಎಂದು ಇಂದ್ರಜಿತ್ ಲಂಕೇಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಡ್ರಗ್ಸ್ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಬೆಂಗಳೂರು ಪೊಲೀಸರಿಗೆ ಕೈಜೋಡಿಸಿ ಎಂದು ಕೇಳಿ ನೋಟಿಸ್ ನೀಡಲಾಗಿತ್ತು. ನೋಟಿಸ್ ಮೇರೆಗೆ ಬಂದು ಸಿಸಿಬಿ ಇನ್ಸ್ಪೆಕ್ಟರ್ ಮುಂದೆ ಹೇಳಿಕೆ ನೀಡಿ ಹೋಗಿದ್ದಾರೆ. ತನಿಖೆಯ ಹಂತದಲ್ಲಿ ಅವರು ಏನು ಹೇಳಿದ್ದಾರೆ ಎಂದು ಹೇಳಲು ಆಗುವುದಿಲ್ಲ ಎಂದು ಸಂದೀಪ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
****
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








