ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚೆಣೆ – ನೈಜೀರಿಯಾ ಪ್ರಜೆ ಬಂಧನ, 1ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳ ವಶ
ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚೆಣೆ ..!
ಯಲಹಂಕ ಹಾಗು ರಾಮಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ ದಾಳಿ
ನೈಜೀರಿಯಾ ಪ್ರಜೆ ಬಂಧನ
ಕೇರಳ ಮೂಲದ ಡ್ರಗ್ ಪೆಡ್ಲರ್ ಗಳ ಬಂಧನ

ಬೆಂಗಳೂರು : ಸಿಸಿಬಿ ಪೊಲೀಸರು ಯಲಹಂಕ ಹಾಗು ರಾಮಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ದಾಳಿ ನಡೆಸಿದ್ದು, ಭರ್ಜರಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.. ಸಿಸಿಬಿಯ ಎರಡು ತಂಡಗಳಿಂದ ಯಲಹಂಕ ಹಾಗು ರಾಮಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕ ದಾಳಿ ನಡೆದಿದೆ.. ಈ ವೇಳೆ ಒಬ್ಬ ನೈಜೀರಿಯಾ ಪ್ರಜೆ ಸೇರಿದಂತೆ ಕೇರಳ ಮೂಲದ ಡ್ರಗ್ ಪೆಡ್ಲರ್ ಗಳನ್ನ ಬಂಧಿಸಿದ್ದಾರೆ. ಬಂಧಿತರಿಂದ 1ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳ ವಶಪಡಿಸಿಕೊಳ್ಳಲಾಗಿದೆ.. ಕೊಕ್ಜೇನ್ ಎಂ ಎ ಟಿ ಎಂ ಮತ್ತು ಎಕ್ಸ್ ಟೆಸಿ ಮಾತ್ರೆ ಗಳ ವಶಕ್ಕೆ ಪಡೆಯಲಾಗಿದೆ ..
ಅಲ್ಲದೇ ಕೃತ್ಯಕ್ಕೆ ಬಳಸಿದ 5 ಮೊಬೈಲ್ , 1 ಕಾರು. 5 ದ್ವಿಚಕ್ರ ವಾಹನ ಒಂದು ತೂಕದ ಯಂತ್ರ ವಶಕ್ಕೆ ಪಡೆದುಕೊಳ್ಳಲಾಗಿದೆ.. ಬಂಧಿತ ನೈಜೀರಿಯಾ ಡ್ರಗ್ ಪೆಡ್ಲರ್ ಭಾರತಕ್ಕೆ ಟೂರಿಸ್ಟ್ ವೀಸಾದಡಿಯಲ್ಲಿ ಬಂದಿದ್ದ ಎನ್ನಲಾಗಿದೆ. ಅಲ್ಲದೇ ಈತ ನಿಯಮಗಳನ್ನು ಉಲ್ಲಂಘಿಸಿ ಭಾರತದಲ್ಲಿ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿದ್ದ, ಎನ್ನಲಾಗಿದ್ದು, ಈತನ ವಿರುದ್ಧ ಎನ್ ಡಿಪಿಎಸ್ ಕಾಯ್ದೆ ಹಾಗೂ ವಿದೇಶಿ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.








