ಮಂಡ್ಯ: ನಾಗಮಂಗಲ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಫೋಟಕ ವಿಚಾರಗಳು ಬೆಳಕಿಗೆ ಬಂದಿವೆ.
ಗಲಭೆ ಸಂದರ್ಭದಲ್ಲಿ ಅಂಗಡಿಗೆ ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಎಸೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಿಡಿಗೇಡಿಗಳ ಪಾಪಿ ಕೃತ್ಯ ಮತ್ತಷ್ಟು ಬಯಲಾಗುತ್ತಿದೆ. ಅಂಗಡಿಗಳಿಗೆ ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಿಡಿಗೇಡಿಗಳು ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.
ಅಷ್ಟಕ್ಕೆ ಸುಮ್ಮನಾಗದ ಪಾಪಿಗಳು ಪೆಟ್ರೋಲ್ ಬಾಂಬ್ ಕೂಡ ಎಸೆದಿದ್ದಾರೆ. ಅಲ್ಲದೇ ತಮ್ಮ ಕೃತ್ಯದ ದೃಶ್ಯ ಸೆರೆಯಾಗಬಾರದು ಎಂದು ಸಿಸಿಟಿವಿಗೆ ಕಲ್ಲು ಹೊಡೆದಿದ್ದಾರೆ. ಈ ವೇಳೆ ಪೊಲೀಸರು ಸ್ಥಳದಲ್ಲೇ ಇದ್ದಾರೆ.
ಆದರೂ ಕಿಡಿಗೇಡಿಗಳನ್ನು ತಡೆಯಲು ಖಾಕಿ ಮುಂದಾಗಿಲ್ಲ. ಸುಮ್ಮನೆ ಪೊಲೀಸರು ಓಡಾಡಿರುವ ದೃಶ್ಯಗಳು ಸೆರೆಯಾಗಿವೆ. ಇದಕ್ಕೆ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ.








