CD case ಸಿಡಿ ಪ್ರಕರಣ | ಬೌರಿಂಗ್ ಆಸ್ಪತ್ರೆಯಲ್ಲಿ ಯುವತಿ ವೈದ್ಯಕೀಯ ಪರೀಕ್ಷೆ
ಬೆಂಗಳೂರು : ಮಾಜಿ ಸಚಿವರ ಸಿಡಿ ಪ್ರಕರಣ ಇದೀಗ ಪ್ರಿ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದ್ದು, ಇಂದು ಬೌರಿಂಗ್ ಆಸ್ಪತ್ರೆಯಲ್ಲಿ ಯುವತಿ ವೈದ್ಯಕೀಯ ಪರೀಕ್ಷೆ ಸಾಧ್ಯತೆ ಇದೆ.
ಯುವತಿಯನ್ನ ಯಾವ ಕ್ಷಣದಲ್ಲಾದ್ರೂ ಮೆಡಿಕಲ್ ಚೆಕಪ್‍ಗೆ ಕರೆ ತರಲಿರೋ ಹಿನ್ನೆಲೆ ಬೌರಿಂಗ್ ಆಸ್ಪತ್ರೆ ಬಳಿ ಪೊಲೀಸರ ಭದ್ರತೆ ಏರ್ಪಡಿಸಲಾಗಿದೆ.
ನಿನ್ನೆ ಯುವತಿ ಮುಖ್ಯನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದು, ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ.
ಈ ಮಧ್ಯೆ ತನಿಖೆಯ ಭಾಗವಾಗಿ ಯುವತಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದು ಅನಿವಾರ್ಯವಾಗಿದೆ,
ಈಗಾಗಲೇ ವೈದ್ಯಕೀಯ ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳಲು ಪೊಲೀಸರು ಮತ್ತು ತನಿಖಾಧಿಕಾರಿಗಳು ವೈದ್ಯರಿಗೆ ತಿಳಿಸಿದ್ದಾರೆ.
ಸ್ತ್ರೀ ರೋಗ ತಙ್ಞರು ಪರೀಕ್ಷೆಗೆ ಯುವತಿಯನ್ನು ಒಳಪಡಿಸಲಿದ್ದಾರೆ.