cd-case ರಕ್ಷಣೆ ಕೋರಿ ಹೈಕೋರ್ಟ್ ಮುಖ್ಯನಾಯಾಧೀಶರಿಗೆ ಯುವತಿ ಪತ್ರ
ಬೆಂಗಳೂರು : ಮಾಜಿ ಸಚಿವರ ಸಿಡಿ ಪ್ರಕರಣ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಯುವತಿ ತನಗೆ ರಕ್ಷಣೆ ಕೋರಿ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ.
ಭಾನುವಾರ ಯುವತಿ ಮೇಲ್ ಮೂಲಕ ಪತ್ರ ಬರೆದಿದ್ದಾರೆ ಎಂದು ಮಾಹಿತಿ ಲಭ್ಯವಾಗಿದ್ದು, ಪತ್ರದಲ್ಲಿ ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ.
ಅವರು ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ನನಗೆ ಮತ್ತು ನನ್ನ ಪೊಷಕರಿಗೆ ರಕ್ಷಣೆ ನೀಡಬೇಕು.
ನಿಮ್ಮ ಮೇಲುಸ್ತುವಾರಿಯಲ್ಲಿ ಎಸ್‍ಐಟಿ ತನಿಖೆ ನಡೆಯಬೇಕು ಎಂದು ಯುವತಿ ಮನವಿ ಮಾಡಿಕೊಂಡಿದ್ದಾರೆ.
ರಮೇಶ್ ಜಾರಕಿಹೊಳಿ ನಿವಾಸಕ್ಕೆ ಕಬ್ಬನ್ ಪಾರ್ಕ್ ಕ್ರೈಂ ಪೊಲೀಸರು ನೋಟಿಸ್ ನೀಡಿದೆ. ಆಡುಗೋಡಿ ಟೆಕ್ನಿಕಲ್ ಸೆಂಟರ್ ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ತಿಳಿಸಿದ್ದಾರೆ.
