Ramesh jarakiholi ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆಗೆ ರಮೇಶ್ ಜಾರಕಿಹೊಳಿ ಚಿಂತನೆ..?
ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಇಂದು ವಿಶೇಷ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.
ಯುವತಿ ದೂರಿನ ಅನ್ವಯ ರಮೇಶ್ ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಹಿನ್ನೆಲೆ ಇಂದು ಬೆಳಗ್ಗೆ ಆಡುಗೋಡಿಯಲ್ಲಿರುವ ಎಸ್ಐಟಿ ಟೆಕ್ನಿಕಲ್ ಸೆಂಟರ್ ಗೆ ಬಂದಿದ್ದ ಅವರು, ಸುಮಾರು 5 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ.
ವಿಚಾರಣೆ ವೇಳೆ ಅವರು ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದ್ದು, ಕೆಲ ಪ್ರಶ್ನೆಗಳಿಗೆ ಸಮಯ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ ಯುವತಿ ನ್ಯಾಯಾಧೀಶರ ಮುಂದೆ ಹಾಜರಾಗಲು ಕೋರ್ಟ್ ಸಮ್ಮತಿಸಿದೆ.
ಇನ್ನೊಂದೆಡೆ ತಮ್ಮ ವಿರುದ್ಧ ಕೇಸು ದಾಖಲಾಗಿರುವ ಕಾರಣ ಅವರು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಲು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.