CD Case ಸಿಡಿ ಕೇಸ್ : ಯುವತಿ ತಾಯಿಯ ಆರೋಗ್ಯದಲ್ಲಿ ಏರುಪೇರು
ವಿಜಯಪುರ : ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಯುವತಿಯ ತಾಯಿ ಆರೋಗ್ಯದಲ್ಲಿ ಏರುಪೇರಾಗಿದೆ.
ಈ ಹಿನ್ನೆಲೆ ಅವರನ್ನ ಚಿಕಿತ್ಸೆಗಾಗಿ ವಿಜಯಪುರಕ್ಕೆ ಕರೆತರಲಾಗಿದೆ.
ಯುವತಿಯ ತಾಯಿ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಕೈ ಕಾಲುಬಾವು ಬಂದಿದ್ದು ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾದ ಕಾರಣ ಚಿಕಿತ್ಸೆಗಾಗಿ ವಿಜಯಪುರಕ್ಕೆ ಕರೆತರಲಾಗಿದೆ.
ಓರ್ವ ಮಹಿಳಾ ಪೊಲೀಸ್ ಪೇದೆ ಹಾಗೂ ಓರ್ವ ಕಾನ್ಸಸ್ಟೇಬಲ್ ಭದ್ರತೆಯೊಂದಿಗೆ ಯುವತಿಯ ತಾಯಿ ವಿಜಯಪುರಕ್ಕೆ ಬಂದಿಳಿದಿದ್ದಾರೆ.
ಇತ್ತ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
