ರಾಯಚೂರು: ರಾಜ್ಯಸಭೆಯ ನೂತನ ಸದಸ್ಯರಾಗಿ ಬಿಜೆಪಿಯ ರಾಯಚೂರು ಮೂಲದ ಅಶೋಕ್ ಗಸ್ತಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ದೆಹಲಿಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಅಶೋಕ್ ಗಸ್ತಿ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಂತೆ ಇತ್ತ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸಮಾಜದ ಬಳಗದಿಂದ ಪಟಾಕಿ ಸಿಡಿಸಿ ಸಿಹಿ ಹಂಚುವುದರ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ. ಮನೋಹರ ರೆಡ್ಡಿ, ಶಶಿಕಾಂತ ಗಸ್ತಿ, ಶಿವಪ್ರಕಾಶ, ಅಶೋಕ ದಿಗ್ಗಾವಿ, ವೀರಭದ್ರಯ್ಯ ವಸ್ತ್ರದ ಮತ್ತಿತರರು ಭಾಗಿಯಾಗಿದ್ದರು.









