ಕಲಬುರಗಿ : ಕಾಂಗ್ರೆಸ್‌ನಿಂದ ರಾಜ್ಯಸಭೆಗೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಟಿಕೆಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿ ಕಾಂಗ್ರೆಸ್ ಭವನದ ಮುಂದೆ ಕೈ ಮುಖಂಡರು ಕಾರ್ಯಕರ್ತರಿಂದ ಸಂಬ್ರಮಾಚರಣೆ ಮಾಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆಯವರ ಭಾವಚಿತ್ರ ಹಿಡಿದು ಸಿಹಿ ಹಂಚಿ ಸಂಭ್ರಮಿಸಿದರು. ಸಂಭ್ರಮದಲ್ಲಿ ಶಾಸಕಿ ಖನೀಜ್ ಫಾತೀಮಾ, ಎಮ್‌ಎಲ್‌ಸಿ ತಿಪ್ಪಣಪ್ಪ ಕಮಕನೂರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಮತ್ತೊಂದೆಡೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಹಿರಿಯ ಮುತ್ಸದ್ದಿ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಅಲ್ಲದೆ
ಖರ್ಗೆಯವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ನಾಯಕ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳು ತಿಳಿಸಿದ್ದಾರೆ.








